Sunday, September 13, 2026

BDA Apartments

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾ...
Home Election 2024 ಶಿವಮೊಗ್ಗ ಲೋಕಸಭಾ ಕ್ಷೇತ್ರದ  ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ  ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ.

ಶಿವಮೊಗ್ಗ,ಏಪ್ರಿಲ್, 15,2024 (www.justkannada.in):  ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್  ಇಂದು ನಾಮಪತ್ರ  ಸಲ್ಲಿಕೆ ಮಾಡಿದರು.

ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ  ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಗೀತಾ  ಶಿವರಾಜ್ ಕುಮಾರ್ ಜೊತೆ ಪತಿ ಶಿವರಾಜ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್  ಉಪಸ್ಥಿತರಿದ್ದರು.ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾ...

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಭಾರಿ ಸಂಖ್ಯೆಯಲ್ಲಿ ಬೆಂಬಲಿಗರು ಜಮಾಯಿಸಿದ್ದರು. ನಟ ಶಿವರಾಜಕುಮಾರ್ ಅವರತ್ತ ಕೈಬೀಸಿ ‘ಶಿವಣ್ಣ, ಶಿವಣ್ಣ’ ಎಂದು ಕೂಗಿದರು. ನಾಮಪತ್ರ ಸಲ್ಲಿಕೆ ಬಳಿಕ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಮೆರವಣಿಗೆ ನಡೆಯಲಿದ್ದು,  ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ.

Key words: Congress, Geetha Sivarajkumar, nomination