ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಹಲವು ಅವಾಂತರ, ಖಾಸಗಿ ವಲಯಕ್ಕೆ ಹೊಡೆತ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.

ಉಡುಪಿ,ಸೆಪ್ಟಂಬರ್,1,2023(www.justkannada.in):  ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಹಲವಾರು ಅವಾಂತರವಾಗಿದೆ. ಖಾಸಗಿ ವಲಯಕ್ಕೆ ಹೊಡೆತ ಬಿದ್ದಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ,  ಎಲ್ಲವನ್ನು ಉಚಿತವಾಗಿ ಕೊಟ್ಟರೆ ಜನರಿಗೆ ಸಂತೋಷ. ಕಳೆದ ತಿಂಗಳು ಈ ರಾಜ್ಯದ ನ್ಯಾಯಾಧೀಶರಿಗೆ, ಶಿಕ್ಷಕರಿಗೆ ಮತ್ತೆಲ್ಲರಿಗೂ ಒಂದು ವಾರ ತಡವಾಗಿ ಸಂಬಳವಾಗಿದೆ. ಹಲವಾರು ಯೋಜನೆಗಳಿಗೆ ಸರಿಯಾಗಿ ಹಣ ಸಿಗುತ್ತಿಲ್ಲ. ಸಾಮಾಜಿಕ ಭದ್ರತಾ ಯೋಜನೆಗೆ ಹಣ ಇಲ್ಲ. ಗ್ಯಾರೆಂಟಿ ಕೊಟ್ಟರೆ ಸಾಕು, ಬೇರೆಲ್ಲ ಬಿದ್ದು ಹೋಗಲಿ ಅಂತ ಕಾಂಗ್ರೆಸ್ ಯೋಚಿಸುತ್ತಿದೆ ಎಂದು ಕಿಡಿಕಾರಿದರು.

ಚೀಪ್ ರಾಜಕಾರಣದಿಂದ ಅವಾಂತರ ಮಾಡಿದ್ದಾರೆ. ಫ್ರೀ ಅಂತ ಇನ್ನೊಬ್ಬರಿಂದ ಕಿತ್ಕೋತಿದ್ದೀರಿ, ದರೋಡೆ ಮಾಡುತ್ತಿದ್ದೀರಿ. ಖಾಸಗಿಯವನು ಸಾಲ ಹೇಗೆ ಕಟ್ಟಬೇಕು? ಜೀವನ ಹೇಗೆ ಮಾಡಬೇಕು? ಖಾಸಗಿ ಅವರಿಗೂ ಹೇಗೆ ಸಹಾಯ ಮಾಡಬಹುದು ಎಂದು ಆಲೋಚಿಸಿ ಎಂದರು.

ರಾಜ್ಯದಲ್ಲಿ ಸರ್ಕಾರಿ ನೌಕರರ ಸಂಬಳ ತಡವಾಗುತ್ತಿದೆ. ವಿಧವಾ ವೃದ್ಧಾಪ್ಯ ವೇತನ ವಿಳಂಬವಾಗುತ್ತಿದೆ,  ಖಾಸಗಿಯವರಿಗೆ ಏನು ಪರ್ಯಾಯ ವ್ಯವಸ್ಥೆ ಮಾಡಿದ್ದೀರಿ?  ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯ ಸರಕಾರದ ಕೊಡುಗೆ ನಿಲ್ಲಿಸಿದ್ದೀರಿ.  ನಮ್ಮ ಹೆಣ್ಣು ಮಕ್ಕಳು ಖುಷಿಯಾಗಿ ಇವತ್ತು ಬಸ್ಸಿನಲ್ಲಿ ಓಡಾಡುತ್ತಿದ್ದಾರೆ ಸಂತೋಷ. ಉಚಿತ ಪಡೆದ ಜನ ಖುಷಿಯಲ್ಲಿದ್ದಾರೆ. ಇರಲಿ. ಸರ್ಕಾರ ಇವತ್ತು ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ. ರೂಟ್ ಬಸ್ 50% ಕಡಿತ ಮಾಡಿದ್ದು ಯಾಕೆ? ಸಾರಿಗೆ ಇಲಾಖೆಯ ಸಂಸ್ಥೆಗಳು ನಷ್ಟಕ್ಕೆ ಹೋಗುತ್ತಿವೆ. ಎಲ್ಲದಕ್ಕೂ ಸಿಎಂ ಸಿದ್ಧರಾಮಯ್ಯ ಉತ್ತರ ಕೊಡಬೇಕು ಎಂದು ಶೋಭಾ ಕರಂದ್ಲಾಜೆ ಆಗ್ರಹಿಸಿದರು.

Key words: Congress -guarantees-chemes, – private sector-Union Minister -Shobha Karandlaje