Sunday, August 23, 2026

BDA Apartments

Home Front Page ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ, ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಅಧಿಕಾರ: ಪ್ರಹ್ಲಾದ್ ಜೋಶಿ

ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ, ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಅಧಿಕಾರ: ಪ್ರಹ್ಲಾದ್ ಜೋಶಿ

ಬೆಂಗಳೂರು, ಡಿಸೆಂಬರ್ 03, 2023 (www.justkannada.in): ರಾಜಸ್ಥಾನದಲ್ಲಿ 124ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಮಧ್ಯಪ್ರದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಕೆಲಸ ಮಾಡಿದೆ ಎಂದು ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ವಹಿಸಿದ್ದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ತೆಲಂಗಾಣ ಬಿಟ್ಟು ಉಳಿದ ಕಡೆ ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ. ಬಿಆರ್ ಎಸ್ ದುರಾಡಳಿತದ ಪರಿಣಾಮ ಕಾಂಗ್ರೆಸ್ ಗೆಲ್ಲುವಂತಾಗಿದೆ ಎಂದು ಜೋಶಿ ಟೀಕಿಸಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ದುರಾಡಳಿತ ಬಗ್ಗೆ ಜನರಿಗೆ ತಿಳಿಸಿದ್ದೆವು. ಬಿಜೆಪಿಯ ಹಿರಿಯ ನಾಯಕರು ಒಟ್ಟಾಗಿ ಕೆಲಸ ಮಾಡಿದ್ದೆವು. ರಾಜಸ್ಥಾನದಲ್ಲಿ 124ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್​ನಲ್ಲೇ ಆಂತರಿಕ ಸಮಸ್ಯೆ ಇದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ 6 ತಿಂಗಳಲ್ಲೇ ಜಗಳವಾಡುತ್ತಿದ್ದಾರೆ ಎಂದು ಜೋಶಿ ಕಿಡಿಕಾರಿದ್ದಾರೆ.