Wednesday, August 5, 2026

BDA Apartments

Home Front Page ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ದಿನೇಶ್ ಗುಂಡೂರಾವ್ ಮುಂದುವರಿಸಲು ಕೈ ಹೈಕಮಾಂಡ್ ಆಸಕ್ತಿ?

ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ದಿನೇಶ್ ಗುಂಡೂರಾವ್ ಮುಂದುವರಿಸಲು ಕೈ ಹೈಕಮಾಂಡ್ ಆಸಕ್ತಿ?

ನವದೆಹಲಿ, ಮಾರ್ಚ್ 7, 2020 (www.juskannada.in): ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ದಿನೇಶ್ ಗುಂಡೂರಾವ್ ಅವರನ್ನೇ ಮುಂದುವರೆಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆಯ ನಿರೀಕ್ಷೆಯಲ್ಲಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಬಿಗ್ ಶಾಕ್ ಎದುರಾಗಿದೆ. ರಾಜ್ಯಉಪಚುನಾವಣೆಯ ಸೋಲಿನ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು.

ಬಳಿಕ ಅಧ್ಯಕ್ಷ ಸ್ಥಾನಕ್ಕೆ ಮುಂಚೂಣಿಯಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಕೇಳಿಬರುತ್ತಿದೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಡಿಕೆಶಿಗೆ ಅಧ್ಯಕ್ಷ ಪಟ್ಟ ಕಟ್ಟಲು ಒಲವು ತೋರಿಲ್ಲ ಎನ್ನಲಾಗಿದೆ.

ಡಿ.ಕೆ.ಶಿವಕುಮಾರ್’ಗೆ ಮತ್ತೆ ಇಡಿ ಅಥವಾ ಸಿಬಿಐನಿಂದ ತೊಂದರೆ ಬಂದರೆ ಕಾನೂನಾತ್ಮಕವಾಗಿ ಹೋರಾಡಬೇಕಾಗುತ್ತದೆ. ಇದರಿಂದ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂಬ ಉದ್ದೇಶದಿಂದ ಡಿಕೆಶಿ ಬದಲು ದಿನೇಶ್ ಗುಂಡೂರಾವ್ ಅವರನ್ನೇ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮರು ಆಯ್ಕೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.