ಬಿಎಸ್ ವೈ ಬಗ್ಗೆ ಅನುಕಂಪದ ಮಾತುಗಳನ್ನಾಡಿ ಕಾಂಗ್ರೆಸ್, ಜೆಡಿಎಸ್ ನಿಂದ ಜನರನ್ನು ಗೊಂದಲಕ್ಕೆ ದೂಡುವ ಪ್ರಯತ್ನ- ಬಿವೈ ವಿಜಯೇಂದ್ರ.

ಬೆಂಗಳೂರು,ಫೆಬ್ರವರಿ,8,2023(www.justkannada.in):  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಬಗ್ಗೆ ಅನುಕಂಪದ ಮಾತುಗಳನ್ನಾಡಿ ಕಾಂಗ್ರೆಸ್, ಜೆಡಿಎಸ್ ಜನರನ್ನು ಗೊಂದಲಕ್ಕೆ ದೂಡುವ ಪ್ರಯತ್ನ ಮಾಡುತ್ತಿವೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಬಿ ವೈ ವಿಜಯೇಂದ್ರ,  ಚುನಾವಣೆ ಹತ್ತಿರವಾಗುತ್ತಿರುವ ಹೊತ್ತಲ್ಲೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಬಿಎಸ್ ಯಡಿಯೂರಪ್ಪನವರ ಬಗ್ಗೆ ಅನುಕಂಪದ ಮಾತುಗಳನ್ನಾಡುತ್ತಿದ್ದಾರೆ. ಜನರನ್ನು ಗೊಂದಲಕ್ಕೆ ದೂಡುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ನಾಡಿನ ಪ್ರಜ್ಞಾವಂತ ಮತದಾರರು ಯಾವುದು ಸರಿ ಯಾವುದು ತಪ್ಪು ಆಂತ ವಿವೇಚಿಸಬಲ್ಲವರಾಗಿದ್ದಾರೆ, ಇವರ ಮರಳು ಮಾಡುವ ಮಾತುಗಳಿಗೆ ಬೇಸ್ತು ಬೀಳುವುದಿಲ್ಲ ಎಂದು ಟಾಂಗ್ ನೀಡಿದರು.

Key words: Congress-JDS – confuse –people-BSY- BY Vijayendra