Saturday, August 1, 2026

BDA Apartments

Home Front Page ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಪ್ರತಿಭಟನೆ: ಮಾಜಿ ಶಾಸಕ ಎಂ.ಕೆ ಸೋಮಶೇಖರ್ ಪೋಲಿಸರ...

ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಪ್ರತಿಭಟನೆ: ಮಾಜಿ ಶಾಸಕ ಎಂ.ಕೆ ಸೋಮಶೇಖರ್ ಪೋಲಿಸರ ವಶಕ್ಕೆ…

ಮೈಸೂರು,ಸೆ,4,2019(www.justkannada.in): ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಮೈಸೂರಿನಲ್ಲೂ ಪ್ರತಿಭಟನೆ ಕಾವು ಹೆಚ್ಚಾಗಿದ್ದು,  ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಧರಣಿ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಭಾಷಾ ಸಂಸ್ಥಾನದ ಹುಣಸೂರು ಮುಖ್ಯ ರಸ್ತೆಯಲ್ಲಿ  ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೋಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದರು.

ಇನ್ನೊಂದೆಡೆ ಮೈಸೂರು –ನಂಜನಗೂಡು ರಸ್ತೆ ತಡೆದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಶಾಸಕ ಎಂ ಕೆ ಸೋಮಶೇಖರ್ ರನ್ನ ಪೋಲಿಸರ ವಶಕ್ಕೆ ಪಡೆದರು.

ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಹಿನ್ನೆಲೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ವಾಹನಗಳು ಸಾಲುಗಟ್ಟಿ ನಿಂತಿದ್ದವು. ಈ ಹಿನ್ನೆಲೆ ಸಂಚಾರಕ್ಕೆ ಅಡಚಣೆ ಮಾಡದಂತೆ ಪ್ರತಿಭಟನೆ ನಡೆಸುವಂತೆ ಪೊಲೀಸರು ಎಚ್ಚರಿಕೆ ನೀಡಿದರೂ ಎಚ್ಚರಿಕೆ ಲೆಕ್ಕಿಸದೆ ಹೆದ್ದಾರಿ ಬಂದ್ ಮಾಡಿ ಧರಣಿ ನಡೆಸಲು ಪ್ರತಿಭಟನಾಕಾರರು ಮುಂದಾದರು. ಸಂಚಾರಕ್ಕೆ ತಡೆ ಮಾಡಿದಕ್ಕೆ ಪ್ರತಿಭಟನಕಾರರನ್ನ ಪೊಲೀಸರು ಬಂಧಿಸಿದರು.

Key words: Congress-JDS- protest – Mysore –condemns- arrest – DK Sivakumar