ಕಾಂಗ್ರೆಸ್ ಗೆ ಶಾಕ್ : ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಸಿ ರಾಮಮೂರ್ತಿ…

ನವದೆಹಲಿ,ಅ,16,2019(www.justkannada.in): ರಾಜ್ಯದಲ್ಲಿ ಉಪಚುನಾವಣೆಗೆ ಸಿದ್ಧತೆ ಪಕ್ಷ ಸಂಘಟನೆಯಲ್ಲಿ ನಿರತವಾಗಿರುವ ಕಾಂಗ್ರೆಸ್‌ಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ.  ರಾಜ್ಯಸಭಾ ಸ್ಥಾನಕ್ಕೆ ಕೆ.ಸಿ ರಾಮಮೂರ್ತಿ ರಾಜೀನಾಮೆ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ರಾಜ್ಯಸಭಾ ಸ್ಥಾನಕ್ಕೆ ಕೆ.ಸಿ ರಾಮಮೂರ್ತಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಅದರ ಜತೆಗೆ ಅವರು ಕಾಂಗ್ರೆಸ್ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಕೆಸಿ ರಾಮಮೂರ್ತಿ ಅವರು 2016ರಲ್ಲಿ ರಾಜ್ಯಸಭೆಗೆ ಕಾಂಗ್ರೆಸ್ ಸದಸ್ಯರಾಗಿ ರಾಜ್ಯದಿಂದ ಆಯ್ಕೆಯಾಗಿದ್ದರು. ರಾಜೀನಾಮೆಗೂ ಮುನ್ನ ಅವರು ಬಿಜೆಪಿಯ ಕೆಲವು ಮುಖಂಡರನ್ನು ಭೇಟಿ ಮಾಡಿದ್ದರು.

ತಮ್ಮ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡಿರುವ ಕೆ.ಸಿ ರಾಮಮೂರ್ತಿ, ನಾನು ರಾಜೀನಾಮೆ ನೀಡಿರುವುದು ಸತ್ಯ. ಮುಂದಿನ ಎರಡು ದಿನಗಳಲ್ಲಿ ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ನಿರ್ಧಾರ ಮಾಡುತ್ತೇನೆ. ದೇಶದ ಪ್ರಗತಿ ಜತೆ ಇರಬೇಕೆಂದು ರಾಜೀನಾಮೆ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

Key words: Congress-KC Ramamurthy -resigned – Rajya Sabha