ಬೆಂಗಳೂರು,ಜನವರಿ,17,2023(www.justkannada.in): ಚೆಕ್ ಬೌನ್ಸ್ ಪ್ರಕರಣದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.![]()
2011ರಲ್ಲಿ ಆಕಾಶ್ ಆಡಿಯೋ ಕಂಪನಿಯ ಎಂ.ಡಿಯಾಗಿದ್ದಂ ಮಧು ಬಂಗಾರಪ್ಪ ಅವರು, ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆಗೆ 6.6 ಕೋಟಿ ರೂ ಬಾಕಿ ಪಾವತಿಗಾಗಿ ಚೆಕ್ ನೀಡಿದ್ದರು. ಈ ಚೆಕ್ ಬೌನ್ಸ್ ಆಗಿತ್ತು. ಹೀಗಾಗಿ ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆಯು ಮಧು ಬಂಗಾರಪ್ಪ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿತ್ತು.
ಈ ನಡುವೆ ಮಧು ಬಂಗಾರಪ್ಪ ಅವರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್ ಮಧು ಬಂಗಾರಪ್ಪ ಅವರಿಗೆ ಜಾಮೀನು ಮಂಜೂರು ಮಾಡಿದೆ.
Key words: Congress leader -Madhu Bangarappa -granted -bail – check bounce- case.







