ಚಿಕ್ಕಮಗಳೂರು,ಡಿಸೆಂಬರ್,11,2025 (www.justkannada.in): ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿ ಆರೋಪಿಗಳನ್ನ ಬಂಧಿಸಿದ್ದಾರೆ.
ನಿತಿನ್, ದರ್ಶನ್, ಅಜಯ್, ದರ್ಶಣ್ ನಾಯ್ಕ್, ಯೋಗೇಶ್, ಪೈಸಲ್ ಬಂಧಿತ ಆರೋಪಿಗಳು, ಡಿಸೆಂಬರ್ 5ರ ರಾತ್ರಿ ಕಾಂಗ್ರೆಸ್ ಮುಖಂಡ ಗಣೇಶ್ ಗೌಡರನ್ನು ಆರೋಪಿಗಳು ಕೊಂದು ತಮಿಳುನಾಡಿನಲ್ಲಿ ತಲೆಮರಿಸಿಕೊಂಡಿದ್ದರು.
ಮಧುರೈನಲ್ಲಿ ನಿನ್ನ 6 ಆರೋಪಿಗಳನ್ನು ಪೊಲೀಸರು ಬಂಧಿಸಿ ಕರೆತಂದಿದ್ದಾರೆ. ಗಣೇಶ್ ಕೊಲೆ ಪ್ರಕರಣದಲ್ಲಿ ಇದುವರೆಗೆ 12 ಆರೋಪಿಗಳನ್ನ ಬಂಧಿಸಲಾಗಿದೆ. ಆರೋಪಿಗಳನ್ನು ಬಂಧಿಸಲು ಪೊಲೀಸರ 4 ವಿಶೇಷ ತಂಡ ರಚಿಸಲಾಗಿತ್ತು. ಈಗಾಗಲೇ ಪ್ರಮುಖ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾನೆ. 6 ಆರೋಪಿಗಳನ್ನ ಕಡೂರು ಜೆಎಂಎಪ್ ಸಿ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿದೆ.
Key words: Congress leader, Ganesh, murder case, 6 accused, arrested







