Friday, August 14, 2026

BDA Apartments

Home Front Page ಸಚಿವ ಸಂಪುಟದಲ್ಲಿ ನನಗೆ ಸ್ಥಾನ ನೀಡುವ ಭರವಸೆ ಕೊಟ್ಟಿದ್ದಾರೆ- ಶಾಸಕ ಬಿ.ಸಿ ಪಾಟೀಲ್  

ಸಚಿವ ಸಂಪುಟದಲ್ಲಿ ನನಗೆ ಸ್ಥಾನ ನೀಡುವ ಭರವಸೆ ಕೊಟ್ಟಿದ್ದಾರೆ- ಶಾಸಕ ಬಿ.ಸಿ ಪಾಟೀಲ್  

ಹಾವೇರಿ, ಜೂ,1,2019(www.justkannada.in):  ಮುಂದಿನ ಸಚಿವ ಸಂಪುಟ ಪುನರಚನೆ ವೇಳೆ ನನಗೆ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಸಿ ಪಾಟೀಲ್  ಹೇಳಿದ್ದಾರೆ.

ಮಾಧ್ಯಮದ ಜತೆ ಇಂದು ಮಾತನಾಡಿದ ಶಾಸಕ ಬಿ.ಸಿ ಪಾಟೀಲ್, ಸಮಾಧಾನ ಆಗುವವರೆಗೂ ಅಸಮಾಧಾನ ಇರುತ್ತದೆ, ಇತ್ತೀಚೆಗೆ ಉಪಮುಖ್ಯಮಂತ್ರಿ ಪರಮೇಶ್ವರ್ ಅವರನ್ನು ಭೇಟಿ ಮಾಡಿದ್ದು, ಅವರು ಸಚಿವ ಸ್ಥಾನ ಸಿಗುವ ಭರವಸೆ ಕೊಟ್ಟಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಸಹ ನನಗೆ ಭರವಸೆ ನೀಡಿದ್ದಾರೆ. ಅವರ ಮಾತಿನ ಮೇಲೆ ನನಗೆ ನಂಬಿಕೆ ಇದೆ. ಅದರ ಹೊರತಾಗಿಯೂ ಎಲ್ಲವನ್ನೂ ಕಾಲ ನಿರ್ಧರಿಸಲಿದೆ ಎಂದು  ಹೇಳಿದರು.

ಕಾಂಗ್ರೆಸ್‍ನಲ್ಲಿ ಎರಡು ಬಾರಿ ಶಾಸಕರಾಗಿರುವ ಬಿ.ಸಿ.ಪಾಟೀಲ್ ಅವರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಇತ್ತೀಚೆಗೆ ಆಪರೇಷನ್ ಕಮಲದ ಪ್ರಕರಣದಲ್ಲಿ ಬಿ.ಸಿ.ಪಾಟೀಲ್ ಅವರ ಹೆಸರು ಕೂಡ ಕೇಳಿಬಂದಿತ್ತು.

Key words:  congress leader has promised to give the minister position. –  MLA BC Patil.