Monday, September 14, 2026

BDA Apartments

ಮೈಸೂರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮನ: ಸ್ವಾಗತಿಸಿದ ಸಿಎಂ ಸಿದ್ಧರ...
Home Front Page ಮೈಸೂರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮನ: ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ

ಮೈಸೂರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮನ: ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ

ಮೈಸೂರು,ಆಗಸ್ಟ್,30,2023(www.justkannada.in):  ಗೃಹಲಕ್ಷ್ಮಿ ಯೋಜನೆಗೆ  ಚಾಲನೆ  ನೀಡುವುದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ.

ಮೈಸೂರಿನ ಮಂಡಕಳ್ಳಿ  ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ ಶಿವಕುಮಾರ್  ಆಗಮಿಸಿದರು. ನಗರಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ‌ಮುಖಂಡರು ಆತ್ಮೀಯವಾಗಿ ಸ್ವಾಗತಿಸಿದರು.ಮೈಸೂರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮನ sidd sidd 2

ಕಾಂಗ್ರೆಸ್​​ನ 4ನೇ ಗ್ಯಾರಂಟಿ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯನವರು ಚಾಲನೆ ನೀಡಲಿದ್ದಾರೆ. ಚಾಲನೆ ಸಿಗುತ್ತಿದ್ದಂತೆ ಮನೆಯ ಯಜಮಾನಿಗೆ ಖಾತೆಗೆ 2 ಸಾವಿರ ರೂ ಜಮೆಯಾಗಲಿದೆ. ಗೃಹಲಕ್ಷ್ಮಿ ಅದ್ಧೂರಿ ಕಾರ್ಯಕ್ರಮಕ್ಕಾಗಿ ಮೈಸೂರು ಶೃಂಗಾರಗೊಂಡಿದೆ.

Key words: Congress leader- Rahul Gandhi- arrives – Mysore.