ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನ್ಯಾಯಾಲಯದಲ್ಲಿ ಹಿನ್ನಡೆ:  ಮೇಲ್ಮನವಿ ಅರ್ಜಿ  ವಜಾ

ಗುಜರಾತ್,ಜುಲೈ,7,2023(www.justkannada.in): ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ವಿಧಿಸಿದ್ಧ 2 ವರ್ಷ ಶಿಕ್ಷೆ ಪ್ರಮಾಣ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನ ಗುಜರಾತ್ ಹೈಕೋರ್ಟ್​  ವಜಾಗೊಳಿಸಿದೆ.

ಈ ಮೂಲಕ  ರಾಹುಲ್​ ಗಾಂಧಿಗೆ ಹಿನ್ನಡೆಯಾಗಿದೆ. ಎರಡು ವರ್ಷಗಳ ಶಿಕ್ಷೆ ಕಾಯಂ. ಮಾರ್ಚ್​ 23ರಂದು ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಬಳಿಕ ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆ ಪ್ರಮಾಣವನ್ನ ಪ್ರಶ್ನಿಸಿ ಗುಜರಾತ್ ಹೈಕೋರ್ಟ್​ ಗೆ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದರು.

ಗುಜರಾತ್ ನ್ಯಾಯಾಲಯ ರಾಹುಲ್ ಗಾಂಧಿಯವರ ಅರ್ಜಿಯನ್ನು ವಜಾಗೊಳಿಸಿದೆ.  ಶಿಕ್ಷೆ ಪ್ರಕಟವಾದ ಬಳಿಕ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು ಸಿಕ್ಕಿದೆ. 2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ತಮ್ಮ ಭಾಷಣದಲ್ಲಿ ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ ಎಂದು ಹೇಳಿದ್ದರು. ಈ ಕುರಿತು ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

Key words: Congress leader -Rahul Gandhi- court- Appeal -dismissed