Friday, August 21, 2026

BDA Apartments

Home Front Page ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಅಂತಿಮ ದರ್ಶನ ಪಡೆದ ಕಾಂಗ್ರೆಸ್ ನಾಯಕ ರಾಹುಲ್...

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಅಂತಿಮ ದರ್ಶನ ಪಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ.

ಬೆಂಗಳೂರು,ಸೆಪ್ಟಂಬರ್,16,2021(www.justkannada.in):  ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

ಕಳೆದ ಎರಡು ದಿನಗಳ ಹಿಂದೆ ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನರಾಗುದ್ದು ಅವರ ಪಾರ್ಥೀವ ಶರೀರವನ್ನ ಬೆಂಗಳೂರಿನ ಅಶೋಕ ನಗರದಲ್ಲಿರುವ  ಸೆಂಟ್ ಪ್ಯಾಟ್ರಿಕ್ ಚರ್ಚ್ ನಲ್ಲಿ  ಅಂತಿಮ ದರ್ಶನಕ್ಕಿಡಲಾಗಿದೆ. ಇಂದು ಆಸ್ಕರ್ ಫರ್ನಾಂಡಿಸ್ ಅವರ ಅಂತ್ಯಕ್ರಿಯೆ ನೆರವೇರಲಿದೆ. 

ಈ ನಡುವೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿ ಆಸ್ಕರ್ ಫರ್ನಾಂಡಿಸ್ ಅವರ ಅಂತಿಮ ದರ್ಶನ ಪಡೆದರು. ಚರ್ಚ್ ಒಳಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಕೆಪಿಸಿಸಿ ಕೊಟ್ಟಿರುವ ಪಟ್ಟಿಯಲ್ಲಿರುವವರು ಪ್ರವೇಶಿಸಬಹುದಾಗಿದೆ.

Key words: Congress leader -Rahul Gandhi – final visionary – former Union minister -Oscar Fernandes.