ಏ.5 ರಂದು ಕೋಲಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ.

ಬೆಂಗಳೂರು,ಮಾರ್ಚ್,28,2023(www.justkannada.in): ಪ್ರಧಾನಿ ನರೇಂದ್ರ ಮೋದಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 5 ರಂದು ಕೋಲಾರ ಪ್ರವಾಸ ಕೈಗೊಂಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿ ಈಗಾಗಲೇ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನ ಕರೆಸಿ ವಿವಿಧ ಕಾರ್ಯಕ್ರಮಗಳನ್ನ ಉದ್ಘಾಟಿಸಿ ಪ್ರಚಾರದಲ್ಲಿ ತೊಡಗಿದೆ. ಇದೀಗ ಕಾಂಗ್ರೆಸ್ ಸಹ ತಮ್ಮ ನಾಯಕ ರಾಹುಲ್ ಗಾಂಧಿ ಅವರನ್ನ ಕರೆಸುತ್ತಿದ್ದು ಲೋಕಸಭಾ ಸದಸ್ಯತ್ವ ಅನರ್ಹತೆಗೆ ಕೋಲಾರದಿಂದಲೇ ಉತ್ತರಿಸಲು ರಾಹುಲ್ ಗಾಂಧಿ ಸಜ್ಜಾಗಿದ್ದಾರೆ.

ಇನ್ನು ವರುಣಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಸಿಎಂ ಸಿದ್ಧರಾಮಯ್ಯ  ಕೋಲಾರದಿಂದಲೂ ಸ್ಪರ್ಧಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 5 ರಂದು ಕೋಲಾರದಲ್ಲಿ ಸತ್ಯಮೇವ ಜಯತೆ ಸಮಾವೇಶ ನಡೆಯಲಿದ್ದು   ಸಮಾವೇಶಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ.

Key words:  Congress leader -Rahul Gandhi – Kolar – April 5