Sunday, September 20, 2026

BDA Apartments

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ BDA JK_Adv BDA Adv
Home Front Page ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ.

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ.

ನವದೆಹಲಿ, ಮೇ, 4,2024 (www.justkannada.in):  ಸಂಸದ ಪ್ರಜ್ವಲ್  ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.

ಈ ಕುರಿತು ಪತ್ರ ಬರೆದಿರುವ ರಾಹುಲ್ ಗಾಂಧಿ, ಪ್ರಕರಣದದಲ್ಲಿ ಯಾರೇ ಆರೋಪಿಗಳಿದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಸಂತ್ರಸ್ತರಿಗೆ ರಕ್ಷಣೆ ಕೊಡಬೇಕು ಎಂದು ತಿಳಿಸಿದ್ದಾರೆ.

ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಕ್ರೂರವಾಗಿ ನಡೆಸಿಕೊಂಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಅಮಿತ್​​ ಶಾ ಅವರಿಗೆ ದೇವರಾಜೇಗೌಡ ಮಾಹಿತಿ ನೀಡಿದ್ದರು, ಅವರಿಗೆ ಟಿಕೆಟ್​​​ ನೀಡಿರುವುದು ಆಘಾತದ ವಿಷಯವಾಗಿದೆ. ಈ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಅವರ ಗಮನಕ್ಕೆ ತಂದರೂ ಅವರ ಪರವಾಗಿ ಪ್ರಚಾರ ಮಾಡಿದ್ದು ಮತ್ತೊಂದು ಶಾಕ್ ನನಗೆ ಎಂದು ಹೇಳಿದ್ದಾರೆ.ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ siddaramaiah-rahul gan...

ಪ್ರಜ್ವಲ್​​​ಗೆ ಭಾರತದಿಂದ ಪರಾರಿಯಾಗಲು ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ ಪ್ರಧಾನಿ ಮೋದಿ ಅವರು ಹರಿಯಾಣ ಕುಸ್ತಿಪಟುಗಳು, ಮಣಿಪುರದ ಘಟನೆಗಳಲ್ಲಿ ಮೌನ ವಹಿಸಿದ್ದಾರೆ. ತಾಯಿಂದಿರ, ಸಹೋದರಿಯರ ಪರವಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದು ಎಂದು ಪತ್ರದಲ್ಲಿ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Key words: Congress leader, Rahul Gandhi, letter, CM Siddaramaiah