ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಂದ ಅಧಿಕೃತ ಚಾಲನೆ.

ಮೈಸೂರು,ಆಗಸ್ಟ್,30,2023(www.justkannada.in):  ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಧಿಕೃತವಾಗಿ ಚಾಲನೆ ದೊರೆಯಿತು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು. ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು. ಇದಕ್ಕೂ ಮುನ್ನ ಕಾಂಗ್ರೆಸ್ ನಾಯಕರಿಗೆ ಮುಖಂಡರು ಸನ್ಮಾನಿಸಿದರು.

ಕಾರ್ಯಕ್ರಮದ ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸಚಿವರಾದ ಡಾ.ಜಿ.ಪರಮೇಶ್ವರ್, ಡಾ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಕೆ.ವೆಂಕಟೇಶ್, ಕೃಷ್ಣ ಭೈರೇಗೌಡ, ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ ಉಪಸ್ಥಿತರಿದ್ದಾರೆ.

ಪ್ರತಿ ತಿಂಗಳು 2 ಸಾವಿರ ರೂ. ಮನೆ ಯಜಮಾನಿ ಖಾತೆಗೆ ನೇರವರ್ಗಾವಣೆಯಾಗಲಿದೆ. ಸುಮಾರು 1.10 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Congress leader -Rahul Gandhi-Mallikarjuna Kharge- officially- launch- Grihalakshmi Yojana – Mysore.