Saturday, August 15, 2026

BDA Apartments

Home Front Page ಮೋದಿ ಕೊಲ್ಲಲು ಸಿದ್ಧರಾಗಿರಿ ಎಂದಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಬಂಧನ

ಮೋದಿ ಕೊಲ್ಲಲು ಸಿದ್ಧರಾಗಿರಿ ಎಂದಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಬಂಧನ

ಬೆಂಗಳೂರು, ಡಿಸೆಂಬರ್ 13, 2022 (www.justkannada.in):ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ರಾಜಾ ಪಟೇರಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ವಿಶೇಷ ಪೊಲೀಸ್ ತಂಡ ದಾಮೋಹ್ ಜಿಲ್ಲೆಯ ಹಟಾ ಪಟ್ಟಣದಲ್ಲಿರುವ ಪಟೇರಿಯಾ ಅವರ ನಿವಾಸಕ್ಕೆ ಹೋಗಿ ಅವರನ್ನು ಬಂಧಿಸಿದ್ದಾರೆ.

ಪವಾಯಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡುವ ವೇಳೆ ಸಂವಿಧಾನವನ್ನು ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ರಾಜಾ ಪಟೇರಿಯಾ ವಿವಾದ ಸೃಷ್ಟಿಸಿದ್ದರು.

ಅಂದಹಾಗೆ ರಾಜಾ ಪಟೇರಿಯಾ ಹೇಳಿಕೆಗೂ ನಮಗೂ ಸಂಬಂಧವಿಲ್ಲ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.