Sunday, September 20, 2026

BDA Apartments

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು BDA JK_Adv BDA Adv
Home Front Page ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಬೆಂಗಳೂರು, ಸೆಪ್ಟೆಂಬರ್ 03, 2023 (www.justkannada.in): ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೋನಿಯಾ ಗಾಂಧಿ ಅವರು ಲಘು ಜ್ವರದಿಂದ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸ್ತುತ ಅವರ ಆರೋಗ್ಯ ಸ್ಥಿರವಾಗಿದ್ದರೂ, ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಎನ್ನಲಾಗಿದೆ.

ಆಗಸ್ಟ್‌ನಲ್ಲಿ ವೈದ್ಯಕೀಯ ತಪಾಸಣೆಗಾಗಿ ಅವರನ್ನು ಲಂಡನ್’ಗೆ ಕರೆದೊಯ್ಯಲಾದ ನಂತರ ಅವರ ಆರೋಗ್ಯದಲ್ಲಿ ಈಗ ಏರುಪೇರು ಉಂಟಾಗಿದೆ.