Tuesday, October 6, 2026

BDA Apartments

ನಾಡು ಕಂಡ ಶ್ರೇಷ್ಠ ಮುತ್ಸದ್ಧಿ ರಾಜಕಾರಣಿ ಎಸ್.ಎಂ ಕೃಷ್ಣ: ಅವರ ಆಡಳಿತ ವೈಖರಿ ರ...
Home Front Page ಮೈಸೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ: ‘ಕೈ’ ಮುಖಂಡರಿಂದ ಸ್ವಾಗತ.

ಮೈಸೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ: ‘ಕೈ’ ಮುಖಂಡರಿಂದ ಸ್ವಾಗತ.

ಮೈಸೂರು, ಅಕ್ಟೋಬರ್,3,2022(www.justkannada.in): ಹಿರಿಯ ಕಾಂಗ್ರೆಸ್ ನಾಯಕಿ, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದಾರೆ.

ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿ ಕಾಂಗ್ರೆಸ್ ಮುಖಂಡರು ಸ್ವಾಗತ ಕೋರಿದರು. ಎರಡು ದಿನಗಳ ಕಾಲ ಮಡಿಕೇರಿಯಲ್ಲಿ ಸೋನಿಯಾಗಾಂಧಿ ಅವರು ವಾಸ್ತವ್ಯ ಹೂಡಬೇಕಿತ್ತು. ಆದರೆ ಹವಮಾನ ವೈಪರಿತ್ಯ ಹಿನ್ನೆಲೆ ಮೈಸೂರಿಗೆ ಆಗಮಿಸಿದ್ದು ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಮೈಸೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ: ‘ಕೈ’ ಮುಖಂಡರಿಂದ ಸ್ವ...

ರಾಜ್ಯದಲ್ಲಿ ಕಾಂಗ್ರೆಸ್ ನಿಂದ ಭಾರತ್ ಜೋಡೋ ಯಾತ್ರೆ ನಡೆಯುತ್ತಿದ್ದು ರಾಹುಲ್ ಗಾಂಧಿ ಭಾಗಿಯಾಗಿದ್ದಾರೆ. ಅಕ್ಟೋಬರ್ 6 ರಿಂದ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

Key words: Congress leader -Sonia Gandhi- arrived-Mysore