ಮಹಿಳಾ ಮೀಸಲಾತಿ ಮಸೂದೆ ನಮ್ಮದು ಎಂದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ.

ನವದೆಹಲಿ,ಸೆಪ್ಟಂಬರ್,19,2023(www.justkannada.in): ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ ಮಾಡಲು ಒಪ್ಪಿಗೆ ನೀಡಲಾಗಿದ್ದು ಈ ಸಂಬಂಧ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

ನಿನ್ನೆಯಿಂದ  ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗದ್ದು’ಮಹಿಳಾ ಮೀಸಲಾತಿ ಮಸೂದೆ’ ಮಂಡನೆಯಾಗುವ ಸಾಧ್ಯತೆ ಇದೆ. ಈ ಕುರಿತು ಮಾತನಾಡಿರುವ ಸೋನಿಯಾ ಗಾಂಧಿ, ‘ಈ ಮಸೂದೆ ನಮ್ಮದು’ ಎಂದು  ಹೇಳಿದ್ದಾರೆ.

ಇಂದು ಹಳೆಯ ಸಂಸತ್ ಭವನಕ್ಕೆ ವಿದಾಯ ಹೇಳಿದ್ದು  ಇಂದಿನಿಂದ ಕಲಾಪಗಳು ಹೊಸ ಸಂಸತ್ ಭವನದಲ್ಲಿ ನಡೆಯಲಿದೆ. ಈ ನಡುವೆ ಕಲಾಪದಲ್ಲಿ ಪಾಲ್ಗೊಳ್ಳಲು ಸಂಸತ್ತಿಗೆ ಪ್ರವೇಶಿಸುತ್ತಿರುವ ವೇಳೆ ಮಸೂದೆ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ  ಉತ್ತರಿಸಿದ ಸೋನಿಯಾ ಗಾಂಧಿಯವರು,  ಈ ಮಸೂದೆ ನಮ್ಮದು,  ಅಪ್ನಾ ಹೈ ಎಂದು ಹೇಳಿದ್ದಾರೆ.

Key words: Congress-leader -Sonia Gandhi – women’s- reservation- bill -ours.