ಬೆಂಗಳೂರು, ಜನವರಿ 09, 2021 (www.justkannada.in): ಕಾವೇರಿ ನದಿ ನೀರಿನ ನಮ್ಮ ಹಕ್ಕಿನ ಪಾಲು ಪಡೆಯಲು, ವಿಫಲರಾದ ಕಾಂಗ್ರೆಸ್ ನಾಯಕರು, ಸಂಗಮದ ದಂಡೆಯಲ್ಲಿ, ಕ್ಷಮೆ ಯಾಚಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.
ಕೊರೊನಾ ಸೋಂಕಿನ ಆತಂಕದ ನಡುವೆ ಕಾನೂನನ್ನು ಲೆಕ್ಕಿಸದೆ ಪಾದಯಾತ್ರೆ’ ಹಮ್ಮಿಕೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಜಿಲ್ಲಾಡಳಿತ ಕ್ರಮ ತೆಗೆದಕೊಳ್ಳುತ್ತದೆ, ಕಾಂಗ್ರೆಸ್ ನಾಯಕರ ನಡವಳಿಕೆ ಅತ್ಯಂತ ಸರಿಯಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಜಿಲ್ಲಾಡಳಿತ ನೋಡಿಕೊಳ್ಳುತ್ತಿದೆ ಎಂದ ಸಚಿವರು, ಕಾಂಗ್ರೆಸ್. ನಾಯಕರು ನೀರಿನ ಮೇಲೆ ರಾಜಕೀಯ ಮಾಡಲು ಹೊರಟಿದ್ದಾರೆ, ಆದರೆ ಜನತೆ ಬುದ್ದಿವಂತರು, ಇವರ ನಾಟಕವನ್ನು ಅರ್ಥ ಮಾಡಿಕೊಂಡಿದ್ದಾರೆ ಎಂದಿದ್ದಾರೆ.
ಮೇಕೆದಾಟು ಯೋಜನೆ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಅಧಿಕಾರದಲ್ಲಿದ್ದಾಗ ನಿರ್ಲಕ್ಷ್ಯ ವಹಿಸಿದ್ದಾರೆ, ಈಗ ಮುಂದಿನ ಚುನಾವಣೆ ದೃಷ್ಟಿಯಿಂದ ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮೇಕೆದಾಟು ಯೋಜನೆಯನ್ನು ಅನುಷ್ಟಾನ ಗಳಿಸಲು ನಮ್ಮ ಸರಕಾರ ಬದ್ದ ಯಾವುದೇ ಸಂಶಯ ಬೇಡ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕರು ಅಧಿಕಾರದಲ್ಲಿದ್ದಾಗ, ಐದು ವರ್ಷದಲ್ಲಿ ಕೇವಲ ಡಿಪಿಆರ್ ಸಲ್ಲಿಸಿದ್ದು ಬಿಟ್ಟರೆ, ಬೇರೆ ಏನೂ ಮಾಡಲಿಲ್ಲ ಎಂದು ಟೀಕಿಸಿದ್ದಾರೆ.






