Friday, October 16, 2026

Dasara Wishes

Happy Dasara
Home Front Page ಸಿಎಂ ರಾಜೀನಾಮೆ ಹಿನ್ನೆಲೆ: ನಾಳೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಿಗದಿ

ಸಿಎಂ ರಾಜೀನಾಮೆ ಹಿನ್ನೆಲೆ: ನಾಳೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಿಗದಿ

ಬೆಂಗಳೂರು,ಮೇ,29,2026 (www.justkannada.in):  ರಾಜ್ಯ ರಾಜಕೀಯದಲ್ಲಿ ನಡೆದ ಧಿಡೀರ್ ಬೆಳವಣಿಗೆಯಿಂದಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ನಾಳೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಿಗದಿ ಮಾಡಲಾಗಿದೆ.

ಸಿದ್ದರಾಮಯ್ಯ ಅವರ ರಾಜೀನಾಮೆ ಹಿನ್ನೆಲೆಯಲ್ಲಿ ನೂತನ ಸಿಎಂ ಆಯ್ಕೆ ಮಾಡಲು  ನಾಳೆ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕಾಂಗ ಸಭೆಯನ್ನು ನಿಗದಿಪಡಿಸಲಾಗಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಈ ಸಭೆಯಲ್ಲಿ ಕಾಂಗ್ರೆಸ್‌ನ ನೂತನ ಶಾಸಕಾಂಗ ಪಕ್ಷದ ನಾಯಕನನ್ನು ಅಧಿಕೃತವಾಗಿ ಆಯ್ಕೆ ಮಾಡುವ ಪ್ರಕ್ರಿಯೆ  ನಡೆಯಲಿದೆ.

ಈ ಸಭೆಗೆ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಿರಬೇಕು ಎಂದು ಕೆಪಿಸಿಸಿ ಕಚೇರಿಯಿಂದಲೇ ರಾಜ್ಯದ ಎಲ್ಲಾ ಕಾಂಗ್ರೆಸ್ ಶಾಸಕರಿಗೂ ಅಧಿಕೃತವಾಗಿ ತುರ್ತು ಮಾಹಿತಿ ಮತ್ತು ಆಹ್ವಾನವನ್ನು ರವಾನಿಸಲಾಗಿದೆ. ಯಾವುದೇ ಶಾಸಕರು ಗೈರಾಗದಂತೆ ಶಿಸ್ತುಬದ್ಧವಾಗಿ ಸಭೆ ನಡೆಸಲು ಪಕ್ಷದ ನಾಯಕತ್ವ ಮುಂದಾಗಿದೆ.ಸಿಎಂ ರಾಜೀನಾಮೆ ಹಿನ್ನೆಲೆ: ನಾಳೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಿಗದಿ jk02_new...

Key words: CM, resignation, Congress party, legislative meeting, scheduled , tomorrow