Sunday, August 23, 2026

BDA Apartments

Home Front Page ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ..

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ..

ಬೆಂಗಳೂರು,ಜುಲೈ,27,2023(www.justkannada.in): ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ  ನಗರದ ಖಾಸಗಿ ಹೋಟೆ‌ಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡಯಲಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ, ಸಿಎಂ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ತುರ್ತು ಸಿಎಲ್‌ಪಿ ಸಭೆ ಕರೆಯಲಾಗಿದ್ದು, ಸಂಜೆ 6.30ಕ್ಕೆ ಸಭೆ ನಡೆಯಲಿದೆ.  ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಪರಿಷತ್ ಸಭಾ ನಾಯಕ ಎನ್.ಎಸ್‌.ಬೋಸರಾಜು ಹಾಗೂ ಸಚಿವರು ಸೇರಿದಂತೆ ಕಾಂಗ್ರೆಸ್‌ನ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ.

ಇಂದು ನಡೆಯುವ ಸಭೆ ಮಹತ್ವದಾಗಿದ್ದು, ಸಚಿವರ ವಿರುದ್ದ ಶಾಸಕರು ಅಸಮಾಧಾನ ವ್ಯಕ್ತಪಡಿಸಿ, ಸಿಎಂ ಗೆ ಪತ್ರ ಬರೆದಿದ್ದರು ಎನ್ನಲಾಗಿತ್ತು. ಈ ಕುರಿತು ಸಭೆಯಲ್ಲಿ ಚರ್ಚೆ ಸಾಧ್ಯತೆ ಇದೆ.

Key words: Congress -Legislative Party -meeting – CM Siddaramaiah- today.