Sunday, September 13, 2026

BDA Apartments

ನಾಳೆ ಮಂಡ್ಯದಲ್ಲಿ ಕಾಂಗ್ರೆಸ್ ಸಮಾವೇಶ: ರಾಹುಲ್ ಗಾಂಧಿಯಿಂದ ಪ್ರಚಾರ BDA JK_Adv BDA Adv
Home Election 2024 ನಾಳೆ ಮಂಡ್ಯದಲ್ಲಿ ಕಾಂಗ್ರೆಸ್ ಸಮಾವೇಶ: ರಾಹುಲ್ ಗಾಂಧಿಯಿಂದ ಪ್ರಚಾರ.

ನಾಳೆ ಮಂಡ್ಯದಲ್ಲಿ ಕಾಂಗ್ರೆಸ್ ಸಮಾವೇಶ: ರಾಹುಲ್ ಗಾಂಧಿಯಿಂದ ಪ್ರಚಾರ.

ಮಂಡ್ಯ,ಏಪ್ರಿಲ್,16,2024 (www.justkannada.in): ಚುನಾವಣಾ ಕಣ ರಂಗೇರಿದ್ದು ನಾಳೆ ಮಂಡ್ಯದಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಲಿದೆ. ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ನಟಿ ರಮ್ಯಾ ಪ್ರಚಾರ ನಡೆಸಲಿದ್ದಾರೆ.

ಮಂಡ್ಯದಲ್ಲಿ ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮತ ಬೇಟೆ ನಡೆಸಲಿದ್ದಾರೆ. ಕಾಂಗ್ರೆಸ್ ಸಮಾವೇಶಕ್ಕೆ ಭರದ ಸಿದ್ಧತೆ ನಡೆಸಲಾಗುತ್ತಿದೆ. ಮಂಡ್ಯದ ವಿವಿ ಮೈದಾನದಲ್ಲಿ ಬೃಹತ್ ವೇದಿಕೆ ತಯಾರಾಗುತ್ತಿದ್ದು ಜರ್ಮನ್ ಟೆಂಟ್ ಮೂಲಕ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ.ನಾಳೆ ಮಂಡ್ಯದಲ್ಲಿ ಕಾಂಗ್ರೆಸ್ ಸಮಾವೇಶ rahul gandhi

ಮಂಡ್ಯ ಶಾಸಕ ಗಣಿಗ ರವಿಕುಮಾರ್  ಅವರು ವೇದಿಕೆ ಪರಿಶೀಲನೆ ನಡೆಸಿದರು.  ರಾಹುಲ್ ಗಾಂಧಿ ನಾಳೆ ಮಧ್ಯಾಹ್ನ 1.30 ಕ್ಕೆ ಮಂಡ್ಯಕ್ಕೆ ಆಗಮಿಸಲಿದ್ದು,  ಕೈ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತ ಪ್ರಚಾರ ಮಾಡಲಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ನಟಿ ರಮ್ಯಾ ಅವರು ಸಾಥ್ ನೀಡಲಿದ್ದಾರೆ ಎನ್ನಲಾಗಿದೆ.

Key words: Congress, Mandya, tomorrow, Rahul Gandhi