ಗತಿ ಇಲ್ಲದವರು ಕಾಂಗ್ರೆಸ್ ನಲ್ಲಿ ಪ್ರಚಾರಕ್ಕೆ ಬರ್ತಾರೆ- ಶಾಸಕ ಕೆ.ಎಸ್ ಈಶ್ವರಪ್ಪ ಲೇವಡಿ.

ಶಿವಮೊಗ್ಗ,ಫೆಬ್ರವರಿ,28,2023(www.justkannada.in):  ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಪದೇ ಪದೇ ರಾಜ್ಯ ಭೇಟಿ ಕುರಿತು ಟೀಕಸಿದ ಕಾಂಗ್ರೆಸ್ ನಾಯಕರಿಗೆ ಶಾಸಕ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಶಾಸಕ ಕೆ.ಎಸ್ ಈಶ್ವರಪ್ಪ, ಗತಿ ಇಲ್ಲದೆ ಇರುವವರು ಕಾಂಗ್ರೆಸ್  ನಲ್ಲಿ ಪ್ರಚಾರಕ್ಕೆ ಬರುತ್ತಾರೆ. ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಮಾತ್ರ ಎಲ್ಲೆಡೆ ಹೋಗ್ತಾರೆ. ಸಮಾವೇಶಗಳನ್ನ ಮಾಡಿಕೊಂಡು ಅವರಿಬ್ಬರು ಓಡಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ನಾಯಕರೇ ಇಲ್ಲ. ಹಾಗಾಗಿ ಯಾರು ಬರುತ್ತಿಲ್ಲ. ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ನಾಯಕರಿಲ್ಲದೆ ಸೊರಗುತ್ತಿದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಹೋದ ಕಡೆ ಕಾಂಗ್ರೆಸ್ ಸೋತಿದೆ. ಪಕ್ಷ ಸಂಘಟನೆಗೆ ನಮ್ಮ ರಾಷ್ಟ್ರೀಯ ನಾಯಕರು ಬರುತ್ತಲೇ ಇರುತ್ತಾರೆ ಎಂದರು.

ನಾಳೇಯಿಂದ ರಾಜ್ಯದ ನಾಲ್ಕು ದಿಕ್ಕುಗಳಲ್ಲಿ ವಿಜಯ ಸಂಕಲ್ಪಯಾತ್ರೆ ನಡೆಯಲಿದೆ. ಮಾರ್ಚ್ 25 ರಂದು ಪ್ರಧಾನಿ ಮೋದಿ ದಾವಣಗೆರೆಗೆ ಬರ್ತಾರೆ ಚಾಮರಾಜ ನಗರದಿಂಧ ವಿಜಯಸಂಕಲ್ಪಯಾತ್ರೆ ಹೊರಡಲಿದೆ. ಜೆಪಿ ನಡ್ಡಾ ಅವರು ವಿಜಯ ಸಂಕಲ್ಪಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದರು.

Key words: Congress-MLA -KS Eshwarappa –criticize