Monday, October 19, 2026

Dasara Wishes

Happy Dasara
Home Front Page ಬಿಜೆಪಿ ಸಂಸದ ಬಿವೈ ರಾಘವೇಂದ್ರರನ್ನ ಗೆಲ್ಲಿಸಿ ಎಂದು ಕರೆ ನೀಡಿದ ಕಾಂಗ್ರೆಸ್ ಶಾಸಕ.

ಬಿಜೆಪಿ ಸಂಸದ ಬಿವೈ ರಾಘವೇಂದ್ರರನ್ನ ಗೆಲ್ಲಿಸಿ ಎಂದು ಕರೆ ನೀಡಿದ ಕಾಂಗ್ರೆಸ್ ಶಾಸಕ.

ಶಿವಮೊಗ್ಗ, ಜನವರಿ, 26,2024(www.justkannada.in):  ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ರಾಜ್ಯ ಕಾಂಗ್ರೆಸ್ ನಾಯಕರು ತೀವ್ರ ಕಸರತ್ತು ನಡೆಸುತ್ತಿದ್ದು ಈ ಮಧ್ಯೆಯೇ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರನ್ನ ಮತ್ತೊಮ್ಮೆ ಗೆಲ್ಲಿಸಿ ಎಂದು ಕರೆ ನೀಡಿ ಅಚ್ಚರಿ ಮೂಡಿಸಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಸಂಸದ ಬಿವೈ ರಾಘವೇಂದ್ರ  ಅವರು ಗೆಲ್ಲಬೇಕು. ಅವರನ್ನು ಆಯ್ಕೆ ಮಾಡುವುದು ಜನರ ಕರ್ತವ್ಯ. ಬಿವೈ ರಾಘವೇಂದ್ರ ಉತ್ತಮ ಕೆಲಸ ಮಾಡಿದ್ದಾರ. ಜಿಲ್ಲೆ ಅಭಿವೃದ್ದಿ ಕೆಲಸ ಗಮನಿಸಿ  ಮುಂದಿನ ಚುನಾವಣೆಯಲ್ಲಿ ಬಿವೈ ರಾಘವೇಂದ್ರ ಗೆಲ್ಲಿಸುವಂತೆ ಕರೆ ನೀಡಿದ್ದಾರೆ.ಬಿಜೆಪಿ ಸಂಸದ ಬಿವೈ ರಾಘವೇಂದ್ರರನ್ನ ಗೆಲ್ಲಿಸಿ ಎಂದು ಕರೆ ನೀಡಿದ ಕಾಂಗ್ರೆಸ್ ...

ಜಿಲ್ಲೆಯ ಜನರು ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ. ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಆಗಿದೆ. ಜನರ ಅಭಿಲಾಷೆಯಂತೆ ರಾಘವೇಂದ್ರ ಅವರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಮುಂದಿನ 2-3 ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಮುಂದೆಯೂ ರಾಘವೇಂದ್ರರನ್ನು ಆಯ್ಕೆ ಮಾಡಬೇಕಿರುವುದು ಜನರ ಕರ್ತವ್ಯ ಎಂದಿದ್ದಾರೆ.

Key words: Congress -MLA –Shamanur Shivashankarappa- MP -BY Raghavendra – win.