ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ‘ಕೈ’ ಶಾಸಕ ಪಕ್ಷದಿಂದ ಸಸ್ಪಂಡ್

ಕೇರಳ, ಆಗಸ್ಟ್,25,2025 (www.justkannada.in):  ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಜೀವ ಬೆದರಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇರಳದ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ ಕೂಟತಿಲ್ ರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಮ್‌ ಕೂಟತಿಲ್ ನನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿದೆ.

ಮಹಿಳೆ ಜತೆ ಶಾಸಕ ರಾಹುಲ್ ಮಮ್‌ ಕೂಟತಿಲ್ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು.  ಗರ್ಭಪಾತ ಮಾಡಿಸುವಂತೆ ಮಹಿಳೆಗೆ ಒತ್ತಾಯಿಸಿದ್ದರು.  ಘಟನೆ ಸಂಬಂಧ ಶಾಸಕ ರಾಹುಲ್ ಮಮ್‌ ಕೂಟತಿಲ್ ವಿರುದ್ದ ಹೈಕಮಾಂಡ್ ಕ್ರಮ ತೆಗೆದುಕೊಂಡಿದ್ದು ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

Key words: Allegation, sexual assault , woman, Congress MLA, suspend