Saturday, September 19, 2026

BDA Apartments

Home Crime ಮೈಸೂರು: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ – ತನ್ವೀರ್ ಸೇಠ್ ಅಭಿಮಾನಿ ವಿಷ ಸೇವಿಸಿ ಆತ್ಮಹತ್ಯೆಗೆ...

ಮೈಸೂರು: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ – ತನ್ವೀರ್ ಸೇಠ್ ಅಭಿಮಾನಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು

A supporter of Mysuru NR MLA Tanveer Sait, identified as Tabrez, allegedly consumed poison after Sait was denied a ministerial berth in the Karnataka Cabinet reshuffle. He was rushed to a hospital and is out of danger, according to doctors. The incident triggered high drama outside Tanveer Sait's residence, where supporters gathered, creating tension for some time. Police rushed to the spot and brought the situation under control.

ಮೈಸೂರು, ಆ. 3: ರಾಜ್ಯ ಸಚಿವ ಸಂಪುಟ ಪುನರ್‌ರಚನೆಯಲ್ಲಿ ಮೈಸೂರು ನರಸಿಂಹರಾಜ (ಎನ್.ಆರ್.) ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಮೈಸೂರಿನಲ್ಲಿ ನಡೆದಿದೆ.

ತನ್ವೀರ್ ಸೇಠ್ ಅವರ ಬೆಂಬಲಿಗ ಹಾಗೂ ಅಭಿಮಾನಿಯಾಗಿರುವ ತಬ್ರೇಜ್ ಎಂಬಾತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಸೇವಿಸಿದ ತಕ್ಷಣ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಸ್ಥಳದಲ್ಲಿದ್ದವರು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಮೈಸೂರು tanveer sait.jpg1

ಘಟನೆ ನಡೆದ ವಿಚಾರ ತಿಳಿಯುತ್ತಿದ್ದಂತೆ ಶಾಸಕ ತನ್ವೀರ್ ಸೇಠ್ ಅವರ ನಿವಾಸದ ಎದುರು ಬೆಂಬಲಿಗರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದರು. ಕೆಲಕಾಲ ಮನೆ ಎದುರು ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿ ಹೈಡ್ರಾಮವೇ ನಡೆಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಂಡರು.

ಆಸ್ಪತ್ರೆಯ ವೈದ್ಯರ ಮಾಹಿತಿ ಪ್ರಕಾರ, ತಬ್ರೇಜ್‌ಗೆ ಚಿಕಿತ್ಸೆ ಮುಂದುವರಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಸಚಿವ ಸ್ಥಾನ ಸಿಗದಿರುವ ಹಿನ್ನೆಲೆಯಲ್ಲಿ ಅಭಿಮಾನಿಯ ಈ ಆತುರದ ನಡೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಯಾವುದೇ ಕಾರಣಕ್ಕೂ ಇಂತಹ ದುಡುಕಿನ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ಹಲವರು ಮನವಿ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Key words: Mysuru, congress MLA, Tanveer Sait, Supporter, Attempts Suicide, After Ministerial Snub

ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ jk02

SUMMARY:

Mysuru: Tanveer Sait Supporter Attempts Suicide After Ministerial Snub

ತನ್ವೀರ್ ಸೇಠ್ ಅಭಿಮಾನಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ mla-congress mla congress

A supporter of Mysuru NR MLA Tanveer Sait, identified as Tabrez, allegedly consumed poison after Sait was denied a ministerial berth in the Karnataka Cabinet reshuffle. He was rushed to a hospital and is out of danger, according to doctors. The incident triggered high drama outside Tanveer Sait’s residence, where supporters gathered, creating tension for some time. Police rushed to the spot and brought the situation under control.

#Mysuru #TanveerSait #KarnatakaCabinet #BreakingNews #JustKannada