ನವದೆಹಲಿ,ಜುಲೈ,22,2026 (www.justkannada.in): ನೀಟ್ ಅಕ್ರಮದ ವಿರುದ್ದ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಕಾಂಗ್ರೆಸ್ ಸಂಸದರ ಪ್ರತಿಭಟನೆ ಮುಂದುವರೆದಿದೆ.
ಇಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಸಂಸದರು ಕಪ್ಪುಬಟ್ಟೆ ಧರಿಸಿ ಆಗಮಿಸಿದ್ದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಇತ್ತ ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷಗಳ ಗದ್ದಲ ಗಲಾಟೆ ಹಿನ್ನೆಲೆಯಲ್ಲಿ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಅವರು ಮಧ್ಯಾಹ್ನ 12 ಗಂಟೆಗೆ ಮುಂದೂಡಿಕೆ ಮಾಡಿದ್ದಾರೆ.
ಇತ್ತ ಸಂಸತ್ ಭವನದ ಬಳಿ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸುತ್ತಿದ್ದು ನೀಟ್ ಅಕ್ರಮ ಮತ್ತು ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.
Key words: ‘congress, MPs, protest, continues:, Lok Sabha, adjourned







