ಮತ್ತೆ ಕಾಂಗ್ರೆಸ್ ಗೆ ವಾಪಸ್ ಹೋಗಲ್ಲ : ಬಿಜೆಪಿಯೇ ಅಧಿಕಾರಕ್ಕೆ ಬರುತ್ತೆ- ಸಚಿವ ಎಂಟಿಬಿ ನಾಗರಾಜ್.

ವಿಜಯಪುರ,ಮೇ,26,2022(www.justkannada.in): ನಾವು ಮತ್ತೆ ಕಾಂಗ್ರೆಸ್ ಗೆ ವಾಪಸ್ ಹೋಗುವುದಿಲ್ಲ. ಬಿಜೆಪಿಯಲ್ಲೇ ಇರುತ್ತೇವೆ ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ವಿಜಯಪುರದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಎಂಟಿಬಿ ನಾಗರಾಜ್,   ಬಿಜೆಪಿ ಸೇರಿದ್ದೇವೆ. ಸಚಿವರಾಗಿದ್ದೇವೆ ಮತ್ತೆ ಕಾಂಗ್ರೆಸ್ ಗೆ ವಾಪಸ್ ಹೋಗಲ್ಲ. ನಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲ್ಲುತ್ತೇವೆ. ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತೆ  ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿವೈ ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಂಟಿಬಿ ನಾಗರಾಜ್,  ವಿಜಯೇಂದ್ರ ನಾಯಕರಾಗಿ ಬೆಳೆಯಲು ಅವಕಾಶ ಇದೆ. ಅವರನ್ನ ಪಕ್ಷ ಸಂಘಟನೆಗೆ ಬಳಸಿಕೊಳ್ಳಬಹುದು.  ತಂದೆಯಂತೆ ವಿಜಯೇಂದ್ರ ಕೂಡ ಪಕ್ಷ ಸಂಘಟನೆ ಮಾಡುತ್ತಾರೆ. ಮುಂದೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಶಾಸಕರಾಗಲಿ ಎಂದರು.

Key words: Congress – not-join-BJP -Minister -MTB Nagaraj.