ದೇಶದಲ್ಲಿ ರಾಜಕೀಯ ಧ್ರುವೀಕರಣ ಶುರು: ಕಾಂಗ್ರೆಸ್  ಸೇರ್ಪಡೆಗೆ ಯಾರಿಗೂ ಒತ್ತಡ ಹಾಕಿಲ್ಲ- ಮಾಜಿ ಸಿಎಂ ಜಗದೀಶ್ ಶೆಟ್ಟರ್.

ಬೆಂಗಳೂರು,ಅಕ್ಟೋಬರ್,12,2023(www.justkannada.in): ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಯಾರಿಗೂ ಒತ್ತಡ ಹಾಕುತ್ತಿಲ್ಲ. ಆದರೆ ಮುಖಂಡರೇ ಕಾಂಗ್ರೆಸ್ ಸೇರ್ಪಡೆಗೆ ಮುಂದೆ ಬರುತ್ತಿದ್ದಾರೆ ಎಂದು ಕಾಂಗ್ರೆಸ್ ಎಂಎಲ್ ಸಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾತನಾಡಿದ ಜಗದೀಶ್ ಶೆಟ್ಟರ್, ಐದು ರಾಜ್ಯಗಳ ಚುನಾವಣೆ ಸೆಮಿಫೈನಲ್, ಲೋಕಸಭೆ ಚುನಾವಣೆ ಫೈನಲ್ ಆಗಿದೆ. ವಾಲೆಂಟರಿಯಾಗಿ ಬಿಜೆಪಿ ನಾಯಕರು ನಮ್ಮನ್ನು ಸಂಪರ್ಕಿಸುತ್ತಿದ್ದಾರೆ. ರಾಜ್ಯ, ದೇಶದಲ್ಲಿ ರಾಜಕೀಯ ಧ್ರುವೀಕರಣ ಶುರುವಾಗಿದ್ದು,  ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಹೇಳಿದರು.

ಇಂದು ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

Key words:  Congress -not pressured -anyone – join- Former CM- Jagdish Shettar