ಹರ್ ಘರ್ ತಿರಂಗಾ ಜಾಹೀರಾತಿನಲ್ಲಿ ಮಾಜಿ ಪ್ರಧಾನಿ ನೆಹರೂ ಫೋಟೋ ಹಾಕದಿದ್ದಕ್ಕೆ ಕಾಂಗ್ರೆಸ್ ಆಕ್ರೋಶ

ರಾಜ್ಯ ಸರ್ಕಾರದ ಹರ್ ಘರ್ ತಿರಂಗಾ ಜಾಹೀರಾತಿನಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಫೋಟೋ ಹಾಕದಿದ್ದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ರಾಜಕೀಯ ದುರುದ್ದೇಶದಿಂದ ನೆಹರೂ ಅವರ ಹೆಸರನ್ನು ಜಾಹೀರಾತಿನಿಂದ ಕೈ ಬಿಟ್ಟಿರುವುದು ಅಕ್ಷಮ್ಯ ಎಂದು ಕಿಡಿಕಾರಿದ್ದಾರೆ. ಈ ಕುರಿತು ಕಾಂಗ್ರೆಸ್ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

ಸಾರ್ವಜನಿಕರ ಹಣದಲ್ಲಿ ದ್ವೇಷ ತೀರಿಸಿಕೊಳ್ಳುವ ಚಾಳಿಯನ್ನು BJP ಮುಂದುವರಿಸಿದೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಪಂ. ಜವಾಹರ್‌ಲಾಲ್‌ ನೆಹರೂ ಅವರನ್ನು ಬ್ರಿಟಿಷರು 9 ಬಾರಿ ಬಂಧಿಸಿ 3259 ದಿನ ಜೈಲಿನಲ್ಲಿರಿಸಿದ್ದರು.

ರಾಜಕೀಯ ದುರುದ್ದೇಶದಿಂದ ನೆಹರೂ ಅವರ ಹೆಸರನ್ನು ಜಾಹೀರಾತಿನಿಂದ ಕೈ ಬಿಟ್ಟಿರುವುದು ಅಕ್ಷಮ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.