ಕಾಂಗ್ರೆಸ್ ಪಾದಯಾತ್ರೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ

ಬೆಂಗಳೂರು,ಜನವರಿ,11,2022(www.justkannada.in):  ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನ ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಸಾಮಾಜಿಕ ಕಾರ್ಯಕರ್ತ ಎ.ವಿ. ನಾಗೇಂದ್ರ ಪ್ರಸಾದ್ ಎಂಬುವರು ಈ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಸ್ಥಿತಿ ಬಿಗಡಾಯಿಸುತ್ತಿದೆ. ಈ ಮಧ್ಯೆ ಪಾದಯಾತ್ರೆಯಿಂದ ಕೋವಿಡ್ ಹಬ್ಬುವ ಸಾಧ್ಯತೆಯಿದೆ. ನಿರ್ಬಂಧವಿದ್ದರೂ ಕೆಪಿಸಿಸಿ ಪಾದಯಾತ್ರೆ ನಡೆಸುತ್ತಿದೆ. ಹೀಗಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಪಾದಯಾತ್ರೆ ಸ್ಥಗಿತಗೊಳಿಸಲು ಕಾಂಗ್ರೆಸ್ ಪಕ್ಷಕ್ಕೆ ನಿರ್ದೇಶನ ನೀಡುವಂತೆ ಸರ್ಕಾರ, ರಾಮನಗರ ಜಿಲ್ಲಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ  ಮಾಡಿದ್ದಾರೆ.

ಪಾದಯಾತ್ರೆ  ಮುಂದುವರೆದರೇ  ಕಾನೂನು ಕ್ರಮ ಕೈಗೊಳ್ಳುವಂತೆ ನಾಗೇಂದ್ರ ಪ್ರಸಾದ್ ಮನವಿ ಮಾಡಿದ್ದಾರೆ.

Key words: congress –padayatra- High Court -PIL