ಕಾಂಗ್ರೆಸ್ ಪಕ್ಷದ್ದು 85 ಪರ್ಸೆಂಟ್ ಭ್ರಷ್ಟಾಚಾರ: ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಬರುತ್ತೆ- ಸಿಎಂ ಬಸವರಾಜ ಬೊಮ್ಮಾಯಿ.

ಬೆಳಗಾವಿ,ಏಪ್ರಿಲ್,26,2023(www.justkannada.in): ಕಾಂಗ್ರೆಸ್ ಪಕ್ಷದಲ್ಲಿ ರಾಜೀವ್ ಗಾಂಧಿಯಂತ ಪ್ರಧಾನಿ ಇದ್ದರು. 100 ರೂ ದೆಹಲಿಯಿಂದ ಬಿಡುಗಡೆ ಮಾಡಿದರೇ ಹಳ್ಳಿಗೆ 15 ರೂ. ಮುಟ್ಟುತ್ತದೆ. ಹಾಗಾದ್ರೆ ಕಾಂಗ್ರೆಸ್ ಪಕ್ಷದು 85 ಪರ್ಸೆಂಟ್ ಭ್ರಷ್ಟಾಚಾರ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.

ಬೆಳಗಾವಿಯಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬೆಳಗಾವಿ ಜಿಲ್ಲೆ ಕನಿಷ್ಠ 15 ಸ್ಥಾನ ಗೆಲ್ಲುವ ವಿಶ್ವಾಸವಿದೆ. ಕೆಲ ಬದಲಾವಣೆ  ಮಾಡಿದ್ದಕ್ಕೂ ಜನರು ಸ್ಪಂದಿಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬರುತ್ತೆ.ರಾಜ್ಯದಲ್ಲಿ ಬಿಜೆಪಿಗೆ ಜನ ಬೆಂಬಲ ಸಿಗುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅವಿಭಾಜ್ಯ ಅಂಗ ಭ್ರಷ್ಟಾಚಾರ. ಸಿದ್ದರಾಮಯ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಆಗಿತ್ತು. ಎಸ್ ಸಿ ಎಸ್ ಟಿ ಮಕ್ಕಳ ದಿಂಬು ಹಾಸಿಗೆಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ನಾಚಿಕೆ ಆಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

Key words: Congress party -85 percent- corruption- BJP – CM Basavaraj Bommai.