ಕಾಂಗ್ರೆಸ್ ಪಕ್ಷ ಸಮುದ್ರ ಇದ್ದಂತೆ: ಶೆಟ್ಟರ್ ಹೋಗಿದ್ದೇ ಒಳ್ಳೆಯದಾಯ್ತು-ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು,ಜನವರಿ,26,2024(www.justkannada.in): ಕಾಂಗ್ರೆಸ್  ಪಕ್ಷ ಸಮುದ್ರ ಇದ್ದಂತೆ. ನೂರಾರು ಜನ ಬರ್ತಾರೆ, ನೂರಾರು ಜನ ಹೋಗುತ್ತಾರೆ. ಒಂದು ರೀತಿಯಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಹೋಗಿದ್ದೇ ಒಳ್ಳಯದಾಯ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್  ಟಾಂಗ್ ನೀಡಿದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಮರು ಸೇರ್ಪಡೆ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಾವು ನೀತಿ, ಸಿದ್ಧಾಂತಗಳ ಮೇಲೆ ರಾಜಕೀಯ ಮಾಡುವವರು. ಅಲ್ಪಸಂಖ್ಯಾತ ಸಮುದಾಯವನ್ನು ಶೆಟ್ಟರ್ ಒಪ್ಪುತ್ತಿರಲಿಲ್ಲ. ಇದರಿಂದ ನಮ್ಮ ಪಕ್ಷ ಸಂಘಟನೆಗೂ ಕಷ್ಟವಾಗುತ್ತಿತ್ತು. ಶೆಟ್ಟರ್ ಹೋಗಿದ್ದೇ ಒಳ್ಳೆಯದಾಯ್ತು. ಅಲ್ಪಸಂಖ್ಯಾತ ಸಮುದಾಯ ಶೆಟ್ಟರ್ ​ರನ್ನ ಒಪ್ಪಿರಲಿಲ್ಲ. ಇದರಿಂದ ನಮ್ಮ ಪಕ್ಷ ಸಂಘಟನೆಗೂ ಕಷ್ಟ ಆಗುತ್ತಿತ್ತು. ಶೆಟ್ಟರ್​​​ ಹೋಗಿದ್ದೇ ಒಳ್ಳೆಯದು ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ ಎಂದು ತಿಳಿಸಿದರು.

ಶೆಟ್ಟರ್ ಅವರು ನಮ್ಮ ಪಕ್ಷ ಬಂದು ಸೇರಿದ್ದರು. ಚುನಾವಣೆ ಮುಂಚಿತವಾಗಿ ನಮಗೆ ಕಾಂಗ್ರೆಸ್​​ ಅಲ್ಲಿ ಗೆಲ್ಲುತ್ತದೆ ಎಂಬ ವಿಶ್ವಾಸ ಇತ್ತು. ಬಿಜೆಪಿ ವಿರುದ್ಧ ದೊಡ್ಡ ದೊಡ್ಡ ಆರೋಪ ಮಾಡಿ ಕಾಂಗ್ರೆಸ್ ಸೇರಿದ್ದರು. ಬಿಜೆಪಿ ವಿರುದ್ದ ಅವರು ಆರೋಪ ಮಾಡಿದ್ದಕ್ಕೆ ಅವರೇ ಉತ್ತರ ಕೊಡಬೇಕು ಎಂದು ಡಿ.ಕೆ ಶಿವಕುಮಾರ್ ಆಗ್ರಹಿಸಿದರು.

Key words: Congress party – like – sea-Jagadish Shettar- departure -bjp – DCM-DK Shivakumar.