ಕಾಂಗ್ರೆಸ್ ಜನರ ಜೀವ ಮತ್ತು ಹೆಣದ ಮೇಲೆ ರಾಜಕಾರಣ ಮಾಡುತ್ತಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

ಹುಬ್ಬಳ್ಳಿ,ಏಪ್ರಿಲ್,13,2024 (www.justkannada.in):   ಕಾಂಗ್ರೆಸ್ ಜನರ ಜೀವ ಮತ್ತು ಹೆಣದ ಮೇಲೆ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಬಂಧನ ಕುರಿತು  ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಎನ್ ಐಎ ಅಧಿಕಾರಿಗಳು ಕಠಿಣ ಪರಿಶ್ರಮದಿಂದ ಉಗ್ರರ ಬಂಧಿಸಿದ್ದಾರೆ. ಆದರೆ ಕಾಂಗ್ರೆಸ್ ಜನರ ಜೀವ ಹಾಗೂ ಹೆಣದ ಮೇಲೆ ರಾಜಕಾರಣ ಮಾಡುತ್ತಿದೆ. ಗುಪ್ತಚರ ಇಲಾಖೆ ಶ್ರಮಪಟ್ಟು ಮಾಹಿತಿ ಸಂಗ್ರಹಿಸಿ ಎನ್‌ಐಎಗೆ ಮಾಹಿತಿ ನೀಡಿದೆ. ರಾಮೇಶ್ವರಂ ಕೆಫೆಯಲ್ಲಿ ಸ್ಪೋಟವಾದಾಗ ದಾರಿ ತಪ್ಪಿಸುವ ಕೆಲಸ ನಡೆದಿತ್ತು. ಸಿಲಿಂಡರ್ ಫೋಟೋ ಅಥವಾ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ ಎಂದು ಡಿಸಿಎಂ ಹಾಗೂ ಗೃಹ ಸಚಿವ ಪರಮೇಶ್ವರ್  ತನಿಖೆಯ ದಾರಿ ತಪ್ಪಿಸುವ ಕೆಲಸ ಮಾಡಿದ್ದರು ಎಂದು ಕಿಡಿಕಾರಿದರು.

ಸರ್ಕಾರದ ವರ್ತನೆಯಿಂದ ಇಂತಹ ಘಟನೆಗಳಿಗೆ ಕುಮ್ಮಕ್ಕು ಸಿಗುತ್ತಿದೆ. ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ಎನ್ ಐ ಎ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದೆ. ನಕಲಿ ದಾಖಲೆ ಸೃಷ್ಟಿಸಿ ವಿದೇಶಕ್ಕೆ ಹಾರಲು ಮುಂದಾಗಿದ್ದವರ ಉಗ್ರರನ್ನು ಇದೀಗ ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಅವಿದಿದ್ದ ಆರೋಪಿಗಳನ್ನು ಎಳೆದು ತಂದಿದೆ. ಆದರೆ ಕಾಂಗ್ರೆಸ್ ಜನರ ಜೀವ ಹಣದ ಮೇಲೆ ರಾಜಕಾರಣ ಮಾಡುತ್ತಿದೆ ಎಂದು ಹರಿಹಾಯ್ದರು.

Key words: Congress, politics, Prahlad Joshi