ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ನಾವು ವಿದ್ಯುತ್ ಬಿಲ್ ಕಟ್ಟಲ್ಲ- ಮೀಟರ್ ರೀಡರ್ ಗೆ ಗ್ರಾಮಸ್ಥರಿಂದ ಅವಾಜ್..

ಚಿತ್ರದುರ್ಗ,ಮೇ,15,2023(www.justkannada.in): ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ನಾವು ವಿದ್ಯುತ್ ಬಿಲ್ ಕಟ್ಟಲ್ಲ ಎಂದು  ಗ್ರಾಮಸ್ಥರು ಬೆಸ್ಕಾಂ ಮೀಟರ್ ರೀಡರ್ ಗೆ ಅವಾಜ್ ಹಾಕಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಚಿತ್ರದುರ್ಗದ  ಜಾಲಿಕಟ್ಟೆಯಲ್ಲಿ ವಿದ್ಯುತ್ ಬಿಲ್ ಪಾವತಿಸಲು ಜನರು ನಿರಾಕರಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ನಾವು ಬಿಲ್ ಕಟ್ಟಲ್ಲ ಎಂದು ಬೆಸ್ಕಾಂ ಮೀಟರ್ ರೀಡರ್ ಗೆ ಗ್ರಾಮಸ್ಥರು ಆವಾಜ್ ಹಾಕಿದ್ದಾರೆ.

ವಿದ್ಯುತ್ ಫ್ರೀ ಎಂದು ಮೊದಲೇ ಕಾಂಗ್ರೆಸ್ ಘೋಷಿಸಿದೆ. ಈಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆಯಲ್ಲ. ಯಾಕೆ ವಿದ್ಯುತ್ ಬಿಲ್ ಕಟ್ಟಬೇಕೆಂದು ಮೀಟರ್ ರೀಡರ್​ಗೆ ಜನರು ಪ್ರಶ್ನಿಸಿದ್ದಾರೆ. ಆದೇಶ ಬರುವವರೆಗೆ ಬಿಲ್ ಕಟ್ಟಬೇಕೆಂದ ಮೀಟರ್ ರೀಡರ್ ತಾಕೀತು ಮಾಡಿದ್ದಾರೆ. ಬಳಿಕ ಗ್ರಾಮಸ್ಥರು ಆದೇಶದ ಬಗ್ಗೆ ಕಾಂಗ್ರೆಸ್ ನವರಿಗೇ ಕೇಳಿ ಎಂದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನೂತನ ಮುಖ್ಯಮಂತ್ರಿ ಪ್ರಮಾಣ ವಚನಸ್ವೀಕರಿಸಿದ ಬಳಿಕ ಮೊದಲ ಸಚಿವ ಸಂಪುಟದಲ್ಲೇ ಗ್ಯಾರಂಟಿಗಳನ್ನು ಅಧಿಕೃತವಾಗಿ ಜಾರಿಗೊಳಿಸಲು ಕಾಂಗ್ರೆಸ್​ ಮುಂದಾಗಿದೆ.

Key words:  Congress – power- electricity bill-villagers -meter reader..