ತಿಹಾರ್ ಜೈಲಿಗೆ ಭೇಟಿ ನೀಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ…

ನವದೆಹಲಿ, ಸೆ,23,2019(www.justkannada.in):  ತಿಹಾರ್ ಜೈಲಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭೇಟಿ ನೀಡಿ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರಿಗೆ ಧೈರ್ಯ ಹೇಳಿದ್ದಾರೆ.

ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ ಐಎನ್‌ಎಕ್ಸ್ ಮೀಡಿಯಾ ಹಗರಣದಲ್ಲಿ ಹಾಗೂ  ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ  ಕರ್ನಾಟಕದ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್  ಇಬ್ಬರು ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಹೀಗಾಗಿ ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ತಿಹಾರ್ ಜೈಲಿಗೆ ಭೇಟಿ ನೀಡಿದ್ದಾರೆ. ಆದರೆ ಪಿ.ಚಿದಂಬರಂ ಅವರನ್ನ ಮಾತ್ರ ಸೋನಿಯಾ ಗಾಂಧಿ  ಭೇಟಿಯಾಗಿ ಧೈರ್ಯ ಹೇಳಿದ್ದಾರೆ. ಒಬ್ಬರ ಭೇಟಿಗೆ ಮಾತ್ರ ಅವಕಾಶವಿರುವ ಹಿನ್ನೆಲೆ ಡಿ.ಕೆ ಶಿವಕುಮಾರ್ ಅವರನ್ನ ಭೇಟಿಯಾಗಲು ಸಾಧ್ಯವಾಗಿಲ್ಲ.

 

Key words: Congress -President -Sonia Gandhi- visits -Tihar Jail-meet- P.Chidambaram