Wednesday, August 12, 2026

BDA Apartments

Home Front Page ನೀಟ್ ಪರೀಕ್ಷೆ ರದ್ದಾಗಿದ್ದಕ್ಕೆ ಕಾಂಗ್ರೆಸ್ ಆಕ್ರೋಶ: ಬಿಜೆಪಿ ಸಂಸದರ ನಿವಾಸದ ಬಳಿ ಪ್ರತಿಭಟನೆ

ನೀಟ್ ಪರೀಕ್ಷೆ ರದ್ದಾಗಿದ್ದಕ್ಕೆ ಕಾಂಗ್ರೆಸ್ ಆಕ್ರೋಶ: ಬಿಜೆಪಿ ಸಂಸದರ ನಿವಾಸದ ಬಳಿ ಪ್ರತಿಭಟನೆ

ಬೆಂಗಳೂರು,ಮೇ,13,2026 (www.justkannada.in):  ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ನೀಟ್ ಪರೀಕ್ಷೆ ರದ್ದಾಗಿದ್ದಕ್ಕೆ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ನಿವಾಸದ ಬಳಿ ಪ್ರತಿಭಟನೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.

ನೀಟ್ ಪರೀಕ್ಷೆ ರದ್ದಾಗಿದ್ದಕ್ಕೆ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನಾಕಾರರು ಭಿತ್ತಿಪತ್ರ ಹಿಡಿದು ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.  ರಾಜಸ್ತಾನದಲ್ಲಿ ನೀಟ್ ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಿತ್ತು.

Key words: cancellation, NEET exam, Congress, Protest