Thursday, August 6, 2026

BDA Apartments

Home Front Page ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಸಮಾಧಾನ

ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಸಮಾಧಾನ

ರಾಮನಗರ,ಜುಲೈ,26,2022(www.justkannada.in):  ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ರಾಮನಗರದಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಕಾಂಗ್ರೆಸ್ ನವರು ಪ್ರತಿಭಟನೆ ನಡೆಸುತ್ತಿದ್ದಾರೆ.  ಆದರೆ ಪ್ರತಿಭಟನೆ ಮಾಡಲು ರಸ್ತೆ ಇಳಿದು ಜನರಿಗೆ ತೊಂದ್ರೆ ಕೊಡಬಾರದು. ಜನರಿಗೆ ತೊಂದ್ರೆ ಕೊಡೋದು ಅನವಶ್ಯಕ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇನ್ನು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಒಕ್ಕಲಿಗ ಸಮುದಾಯ ಆಕ್ರೋಶದ ಬಗ್ಗೆ ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ,   ಜನ ತೀರ್ಮಾನ ಮಾಡ್ತಾರೆ, ತಲೆ ಕೆಡಿಸಿಕೊಳ್ಳಬೇಡಿ. ಎಲ್ಲದಕ್ಕೂ ಕಾಲ ಉತ್ತರ ಕೊಡುತ್ತೆ ಎಂದರು.

Key words: Congress- protest- against- Sonia Gandhi -ED – Former CM- HD Kumaraswamy