ಬೆಂಗಳೂರು,ಜನವರಿ,23,2026 (www.justkannada.in): ನಿನ್ನೆಯಿಂದ ಆರಂಭವಾಗಿರುವ ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಡೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡದ ರಾಜ್ಯಪಾಲರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.
ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರು ಬದಲಿಸಿದ್ದಕ್ಕೆ ವಿರೋಧಿಸಿ ನಿನ್ನೆಯಿಂದ ಜನವರಿ 31ರವರೆಗೆ ರಾಜ್ಯ ಸರ್ಕಾರ ವಿಶೇಷ ಅಧಿವೇಶನ ನಡೆಸುತ್ತಿದ್ದು ನಿನ್ನೆ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಬೇಕಿತ್ತು. ಆದರೆ ರಾಜ್ಯಪಾಲರು ಒಂದೇ ಸಾಲಿನಲ್ಲಿ ಭಾಷಣ ಮುಗಿಸಿ ಹೊರಟು ಹೋದರು. ಈ ವೇಳೆ ಸದನದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ದ ಧಿಕ್ಕಾರ ಕೂಗಿ ಹೈಡ್ರಾಮಾ ಸೃಷ್ಠಿಯಾಗಿತ್ತು.
Key words: Oppose, Governor’s, move, congress, protest, BJP office







