ಡಿಕೆ ಶಿವಕುಮಾರ್ ನಿವಾಸ ಮೇಲೆ ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಪೊಲೀಸರ ಜತೆ ವಾಗ್ವಾದ…

ಬೆಂಗಳೂರು,ಅಕ್ಟೋಬರ್,5,2020(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್ ಬೀದಿಗಿಳಿದಿದೆ.jk-logo-justkannada-logo

ಬೆಳ್ಳಂಬೆಳಿಗ್ಗೆ ಡಿ.ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿಯಾಗುತ್ತಿದ್ದಂತೆ ಡಿ.ಕೆ ಶಿವಕುಮಾರ್ ನಿವಾಸದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದು ಸಿಬಿಐ ದಾಳಿ ಖಂಡಿಸಿ ನಿವಾಸದ ಬಳಿ ಪ್ರತಿಭಟನೆಗಿಳಿದಿದ್ದಾರೆ. ಡಿ.ಕೆಶಿ ಮನೆ ಬಳಿ ರಸ್ತೆಯಲ್ಲೇ ಕುಳಿತು ಧರಣಿ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ.

congress-protest-cbi-attack-dk-sivakumars-residence

ಈ ನಡುವೆ ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ. ಈ ಮೂಲಕ ಡಿ.ಕೆ ಶಿವಕುಮಾರ್ ನಿವಾಸದ ಬಳಿ ಹೈಡ್ರಾಮಾ ನಡೆದಿದೆ.

Key words: Congress- protest-CBI -attack -DK Sivakumar’s- residence