Tuesday, August 11, 2026

BDA Apartments

Home Front Page ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಕೇವಲ ರಾಜಕೀಯ ಸ್ಟಂಟ್- ಮಾಜಿ ಸಿಎಂ ಬೊಮ್ಮಾಯಿ ಟೀಕೆ.

ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಕೇವಲ ರಾಜಕೀಯ ಸ್ಟಂಟ್- ಮಾಜಿ ಸಿಎಂ ಬೊಮ್ಮಾಯಿ ಟೀಕೆ.

ಬೆಂಗಳೂರು,ಫೆಬ್ರವರಿ,5,2024(www.justkannada.in): ಅನುದಾನದ ವಿಚಾರವಾಗಿ ಫೆಬ್ರವರಿ 7 ರಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿರುವುದು ಕೇವಲ ರಾಜಕೀಯ ಸ್ಟಂಟ್ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಅನುದಾನ ಹಂಚಿಕೆ ತಾರತಮ್ಯ ಕುರಿತು ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಆರೋಪ ಕುರಿತು ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಯುಪಿಎ ಸರ್ಕಾರದ ಇದ್ದಾಗ ತೆರಿಗೆ ಪರಿಹಾರ 81,785 ಕೋಟಿ ರೂ. ಇತ್ತು. ಎನ್ ​ಡಿಎ ಅವಧಿಯಲ್ಲಿ 2.90 ಲಕ್ಷ ಕೋಟಿ ರೂ. ತೆರಿಗೆ ಪರಿಹಾರ ಬಂದಿದೆ. ಸಿಎಂ ಸಿದ್ದರಾಮಯ್ಯ ತಮ್ಮ ಹಳೆಯ ಚಾಳಿ ಬಿಟ್ಟಿಲ್ಲ. ವೈಫಲ್ಯ ಮುಚ್ಚಿಕೊಳ್ಳುವ ಸಲುವಾಗಿ ಕೇಂದ್ರದ ಕಡೆ ಬೊಟ್ಟು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಫೆ.7ರಂದು ನಾವು ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಗಳಲ್ಲಿ ಯಾವುದೂ ಸತ್ಯಾಂಶ ಇಲ್ಲ. ಬರ ಪರಿಹಾರ ಬಗ್ಗೆ ನಮ್ಮ ಸಂಸದರು ಕೇಂದ್ರ ಸಚಿವರ ಜತೆ ಮಾತಾಡಿದ್ದಾರೆ. ಆದಷ್ಟು ಬೇಗ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ ಆಗಲಿದೆ ಎಂದು ಬೊಮ್ಮಾಯಿ ತಿಳಿಸಿದರು.

Key words: Congress-protest – Delhi – just – political stunt- Former CM- Bommai