ಲೋಕಸಭೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸಂಸದ ಪ್ರತಾಪ್ ಸಿಂಹ ಅಮಾನತಿಗೆ ಆಗ್ರಹ.

ನವದೆಹಲಿ,ಡಿಸೆಂಬರ್,14,2023(www.justkannada.in): ಲೋಕಸಭೆಯಲ್ಲಿ ನಿನ್ನೆ ಭದ್ರತಾ ವೈಪಲ್ಯ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ದ ಲೋಕಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು.
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನ ಅಮಾನತು ಮಾಡಬೇಕು. ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ ಕಾಂಗ್ರೆಸ್ ಸಂಸದರು, ಭದ್ರತಾ ವೈಪಲ್ಯ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡುವಂತೆ ಪಟ್ಟು ಹಿಡಿದರು.
ಲೋಕಸಭೆಯಲ್ಲಿ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನ ಮುಂದೂಡಿಕೆ ಮಾಡಿದರು.
Key words: Congress -protest – Lok Sabha- Security breach