ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆ: ಸಿಎಂ ಬಿಎಸ್ ವೈ ನಿವಾಸಕ್ಕೆ  ಪೊಲೀಸ್ ಬಿಗಿ ಭದ್ರತೆ…

ಬೆಂಗಳೂರು,ಫೆ,15,2020(www.justkannada.in): ಸರ್ಕಾರದ ಕಾರ್ಯವೈಖರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ  ಕಾಂಗ್ರೆಸ್ ಕಾರ್ಯಕರ್ತರು ಇಂದು ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವ ಸಾಧ್ಯತೆ ಇರುವ ಹಿನ್ನೆಲೆ ಸಿಎಂ ಬಿಎಸ್ ವೈ ನಿವಾಸಕ್ಕೆ ಪೊಲೀಸ್ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ನಗರದ ಡಾಲರ್ಸ್ ಕಾಲೋನಿಯಲ್ಲಿರುವ ದವಳಗಿರಿ ನಿವಾಸದ ಸುತ್ತಮುತ್ತ ಬಿಗಿ ಭದ್ರತೆ ವಹಿಸಲಾಗಿದೆ. ಇಬ್ಬರು ಎಸಿಪಿಗಳ ನೇತೃತ್ವದಲ್ಲಿ ಭದ್ರತೆ ವಹಿಸಲಾಗಿದೆ. ಸಿಎಂ ಬಿಎಸ್ ವೈ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಮೌರ್ಯ ಸರ್ಕಲ್ ನಿಂದ ಸಿಎಂ ನಿವಾಸದವರೆಗೆ ರ್ಯಾಲಿಯಲ್ಲಿ ಬಂದು  ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಹೀಗಾಗಿ ಮೌರ್ಯ ಸರ್ಕಲ್ ಬಳಿ 300 ಪೊಲೀಸರನ್ನ ನಿಯೋಜಿಸಲಾಗಿದ್ದು ಬ್ಯಾರಿಕೇಡ್ ಅಳವಡಿಸಲಾಗಿದೆ.  ಶಾಹೀನ್ ಶಾಲೆಯ ವಿರುದ್ದ ದೇಶದ್ರೋಹ ಪ್ರಕರಣ  ಹಾಕಿರುವುದು ಸೇರಿ ಹಲವು ವಿಚಾರಗಳನ್ನ ಇಟ್ಟುಕೊಂಡು ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

Key words: Congress -protest -Police -tight security -CM BS Y- residence.