Wednesday, September 23, 2026

BDA Apartments

Home Front Page ವಿಧಾನಸಭೆಯಲ್ಲಿ ಕಾಂಗ್ರೆಸ್ ಧರಣಿ: ಕಲಾಪ ಮುಂದೂಡಿಕೆ.

ವಿಧಾನಸಭೆಯಲ್ಲಿ ಕಾಂಗ್ರೆಸ್ ಧರಣಿ: ಕಲಾಪ ಮುಂದೂಡಿಕೆ.

ಬೆಂಗಳೂರು,ಫೆಬ್ರವರಿ,17,2022(www.justkannada.in): ಕೇಸರಿ ಧ್ವಜ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ವಿಧಾನ ಸಭೆಯಲ್ಲಿ ಇಂದು ಸಹ ಕಾಂಗ್ರೆಸ್ ಸದಸ್ಯರ ಧರಣಿ ಮುಂದುವರೆಸಿದ್ದು ಈ ಹಿನ್ನೆಲೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಲಾಪವನ್ನ ಮಧ್ಯಾಹ್ನ 3ಗಂಟೆಗೆ ಮುಂದೂಡಿದರು.

ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು ಹಿಡಿದಿದ್ದು ನಿನ್ನೆಯಿಂದಲೂ  ಸದನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಮಧ್ಯೆ ಇಂದು ಸಹ ಸದನದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿ ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿದರು. ಕಾಂಗ್ರೆಸ್ ಸದಸ್ಯರ ಧರಣಿ ಗದ್ದಲದ ನಡುವೆ ಪ್ರಶ್ನೋತ್ತರ ಕಲಾಪ ಆರಂಭವಾಯಿತು.ವಿಧಾನಸಭೆಯಲ್ಲಿ ಕಾಂಗ್ರೆಸ್ ಧರಣಿ: ಕಲಾಪ ಮುಂದೂಡಿಕೆ images

ಆದರೆ ಕಾಂಗ್ರೆಸ್ ಸದಸ್ಯರ ಪ್ರತಿಭಟನೆ ಗದ್ದಲ ಜೋರಾದ ಹಿನ್ನೆಲೆ  ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಲಾಪವನ್ನ ಮಧ್ಯಾಹ್ನ 3ಗಂಟೆಗೆ ಮುಂದೂಡಿದರು.

Key words: congress-protest-session