ಬೆಂಗಳೂರು,ಜನವರಿ,27,2026 (www.justkannada.in): ಮನ್ ರೇಗಾ ಯೋಜನೆಯ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ಇಂದು ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದ್ದು ರಾಜ್ಯಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದಾರೆ.
ಈ ಪ್ರತಿಭಟನೆಯಲ್ಲಿ ರಾಜ್ಯಾದ್ಯಂತ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ನರೇಗಾ ಕಾರ್ಯಕರ್ತರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ಜೊತೆಗೆ, ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿ ಕ್ಷೇತ್ರದಲ್ಲೂ ಕನಿಷ್ಠ 5 ಕಿಲೋಮೀಟರ್ ಪಾದಯಾತ್ರೆ ನಡೆಸುವಂತೆ ಸೂಚಿಸಲಾಗಿದೆ
ಕೇಂದ್ರ ಸರ್ಕಾರ ಮನ್ ರೇಗಾ ಯೋಜನೆಯ ಹೆಸರನ್ನ ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ್ದು ಇದಕ್ಕೆ ದೇಶಾದ್ಯಂತ ಕಾಂಗ್ರೆಸ್ ಸೇರಿ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.
Key words: Congress, protests, against, name change, MNREGA scheme







