ಬಿಜೆಪಿ ಸರಕಾರದ ವಿರುದ್ಧ ನಾಳೆ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು, ಜುಲೈ 26, 2020 (www.justkannada.in): ಬೆಂಗಳೂರು, ಬಿಜೆಪಿ ಸರಕಾರ ದ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್  ಸಿದ್ಧತೆ ನಡೆಸಿದೆ.

ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ಪೂರೈಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ ಹೆಸರಿನಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

ನಾಳೆ ಮಧ್ಯಾಹ್ನ ರಾಜಭವನದ ಮುಂದೆ ಕಾಂಗ್ರೆಸ್ ಸಂಸದರು, ಶಾಸಕರು, ಮಾಜಿ ಶಾಸಕರು,ಮಾಜಿ ಸಂಸದರು, ಪಕ್ಷದ ಪ್ರಮುಖ ನಾಯಕರು,ಪದಾಧಿಕಾರಿಗಳು ಪ್ರತಿಭಟನೆ ನಡೆಸಲಿದ್ದಾರೆ.