Thursday, August 13, 2026

BDA Apartments

Home Front Page ಆಗ ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಸರಿಯಾಗಿತ್ತಾ? : ಎಐಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಕೆ ಪಾಟೀಲ್

ಆಗ ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಸರಿಯಾಗಿತ್ತಾ? : ಎಐಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಕೆ ಪಾಟೀಲ್

ಬೆಂಗಳೂರು,ಡಿಸೆಂಬರ್,06,2020(www.justkannada.in) : ಕುಮಾರಸ್ವಾಮಿ ಕಾಂಗ್ರೆಸ್ ಬೆಂಬಲ ಪಡೆದು 14 ತಿಂಗಳು ಸಿಎಂ ಆಗಿರಲಿಲ್ಲವೆ? ಆಗ ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಸರಿಯಾಗಿತ್ತಾ? ಆಗ ಮಾತನಾಡಬೇಕಿತ್ತು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಕೆ.ಪಾಟೀಲ್ ಪ್ರಶ್ನಿಸಿದ್ದಾರೆ.logo-justkannada-mysoreಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ ವಿರುದ್ಧ ನೀಡಿರುವ ಹೇಳಿಕೆಯ ಕುರಿತು ಪ್ರತಿಕ್ರಿಯೆ ನೀಡಿದ ಅವರು ಕುಮಾರ ಸ್ವಾಮಿ ಅವರನ್ನು ಟೀಕಿಸಿದರು.

ಈಗ ಕಾಂಗ್ರೆಸ್ ಮೇಲೆ ಬೊಟ್ಟು ಮಾಡಿ ತೋರಿಸುವುದು ಎಚ್.ಡಿ.ಕೆಗೆ ಶೋಭೆ ತರುವುದಿಲ್ಲ.  ಸಿದ್ದರಾಮಯ್ಯ ನೇತೃತ್ವದಲ್ಲಿ ಹಿರಿಯ ಶಾಸಕರ ಸಭೆಯ ಕುರಿತು ಪ್ರತಿಕ್ರಿಯೆ ನೀಡಿದ ಎಚ್.ಕೆ ಪಾಟೀಲ್ ನಾಳೆಯಿಂದ ಆರಂಭಗೊಳ್ಳಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚಿಸಲಿದ್ದೇವೆ ಎಂದರು.

ಈ ನಡುವೆ ರಾಜ್ಯ ಸರ್ಕಾರದ ಕುರಿತು ಮಾತನಾಡಿ ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಜನರ ನೆರವಿಗೆ ಧಾವಿಸಲಿಲ್ಲ. ಆರ್ಥಿಕ ಸಂಕಷ್ಟದಲ್ಲಿರುವ ಹಲವು ವರ್ಗಗಳಿಗೆ ಇನ್ನೂ ಪರಿಹಾರ ದೊರೆತಿಲ್ಲ.ಸಂಪುಟ ವಿಸ್ತರಣೆ ಗಲಾಟೆಯಲ್ಲಿ ಬಿಜೆಪಿ ಸರ್ಕಾರ ಆಡಳಿತವನ್ನೇ ಮರೆತಿದೆ. ಈ ಕಾರಣದಿಂದಾಗಿ ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ಆಕ್ರೋಶವ್ಯಕ್ತಪಡಿಸಿದರು.

Congress-right-Kumaraswamy?-AICC-General- Secretary-H.K.Patil

key words : Congress-right-Kumaraswamy?-AICC-General- Secretary-H.K.Patil