Monday, October 12, 2026

Dasara Wishes

Mysore dasara DasraWishes_JK DasraWishes JK
Happy Dasara
Home Front Page ಕಾಂಗ್ರೆಸ್ ಮುಳುಗುತ್ತಿರುವ ಹಡಗು-ಮಾಜಿ ಸಿಎಂ ಬಿಎಸ್ ವೈ ಟೀಕೆ.

ಕಾಂಗ್ರೆಸ್ ಮುಳುಗುತ್ತಿರುವ ಹಡಗು-ಮಾಜಿ ಸಿಎಂ ಬಿಎಸ್ ವೈ ಟೀಕೆ.

ಕಲಬುರಗಿ, ಮಾರ್ಚ್,16,2024(www.justkannada.in): ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಕೇವಲ ಪ್ರಚಾರಕ್ಕಾಗಿ ಕೆಲವು ಕಾರ್ಯಕ್ರಮ ಘೋಷಣೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಟೀಕಿಸಿದರು.

ಇಂದು ಕಲ್ಬುರ್ಗಿಯಲ್ಲಿ ನಡೆದ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕಲ್ಯಾಣ ಕರ್ನಾಟಕದಿಂದಲೇ ಪ್ರಧಾನಿ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಾರೆ. ರಾಜ್ಯಕ್ಕೆ ಸಾಕಷ್ಟು ಅನುದಾನ ಕೊಟ್ಟಿದ್ದಾರೆ. ಈ ಬಾರಿ ರಾಜ್ಯದಲ್ಲಿ  ನಾವು 28 ಕ್ಕೆ 28 ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಕಾಂಗ್ರೆಸ್ ಮುಳುಗುತ್ತಿರುವ ಹಡಗು-ಮಾಜಿ ಸಿಎಂ ಬಿಎಸ್ ವೈ ಟೀಕೆ bsy

ರಾಜ್ಯದಲ್ಲಿ ಬಿಜೆಪಿ ಗಾಳಿ ಬೀಸುತ್ತಿದ್ದು, ಯಾವುದೋ ಕಾರಣದಿಂದ ವಿಧಾನಸಭೆಯಲ್ಲಿ ಹಿನ್ನಡೆಯಾಗಿರಬಹುದು, ರಾಜ್ಯದ 28 ಕ್ಷೇತ್ರದಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನಾದರೂ ಗೆಲ್ಲಲಿ ನೋಡೋಣ ಎಂದು ಬಿಎಸ್ ವೈ ಸವಾಲು ಹಾಕಿದರು.

Key words: Congress – sinking ship-former CM- BS yeddyurappa